ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೂಂಡಾ ಕಾಯ್ದೆ: ರೌಡಿ ವೀರು ಬಂಧನ

Last Updated 1 ಅಕ್ಟೋಬರ್ 2022, 3:06 IST
ಅಕ್ಷರ ಗಾತ್ರ

ಬೆಂಗಳೂರು: ಅಪರಾಧ ಚಟುವಟಿಕೆ ತಡೆಗೆ ಕಠಿಣ ಕ್ರಮ ಕೈಗೊಂಡಿರುವ ಪೊಲೀಸರು, ಸಾರ್ವಜನಿಕರನ್ನು ಬೆದರಿಸುವ ರೌಡಿಗಳನ್ನು ಗೂಂಡಾ ಕಾಯ್ದೆಯಡಿ ಒಬ್ಬೊಬ್ಬರನ್ನಾಗಿ ಬಂಧಿಸಿ ಜೈಲಿಗಟ್ಟುತ್ತಿದ್ದಾರೆ. ಈ ಬಾರಿ ರೌಡಿ ಎಲ್‌. ಸಾಗರ್ ಅಲಿಯಾಸ್ ವೀರುನನ್ನು ಬಂಧಿಸಿದ್ದಾರೆ.

‘ಕಾಮಾಕ್ಷಿಪಾಳ್ಯ 4ನೇ ಮುಖ್ಯರಸ್ತೆ ನಿವಾಸಿ ಸಾಗರ್, ರೌಡಿ ಕುಳ್ಳ ರಿಜ್ವಾನ್ ಸಹಚರ. ಕೊಲೆ ಯತ್ನ, ಸುಲಿಗೆ, ಅಪಹರಣ, ಹಲ್ಲೆ ಸೇರಿದಂತೆ8 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಸಾಗರ್ ಹೆಸರು ತಲಘಟ್ಟಪುರಠಾಣೆಯ ರೌಡಿ ಪಟ್ಟಿಯಲ್ಲಿತ್ತು’ ಎಂದು ಸಿಸಿಬಿ ಪೊಲೀಸರು ಮಾಹಿತಿನೀಡಿದರು.

‘ರಾಜರಾಜೇಶ್ವರಿನಗರ, ಹನುಮಂತನಗರ, ಗಿರಿನಗರ, ರಾಜಗೋಪಾಲನಗರ, ಆರ್‌.ಎಂ.ಸಿ ಯಾರ್ಡ್, ಸಂಜಯನಗರ ಹಾಗೂ ಹುಳಿಮಾವು ಠಾಣೆ ವ್ಯಾಪ್ತಿಯಲ್ಲೂ ಸಾಗರ್ ಅಪರಾಧ ಕೃತ್ಯ ಎಸಗಿದ್ದ. ಕೆಲ ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಜಾಮೀನಿನ ಮೇಲೆ ಹೊರಬಂದಿದ್ದ.’

‘ರೌಡಿ ಎಂಬುದಾಗಿ ಹೇಳಿಕೊಂಡು ಸುತ್ತಾಡುತ್ತಿದ್ದ ಆರೋಪಿಗಳು, ಸಾರ್ವಜನಿಕರನ್ನು ಬೆದರಿಸುತ್ತಿದ್ದ. ಈ ಬಗ್ಗೆ ಪುರಾವೆ ಸಂಗ್ರಹಿಸಿ ಗೂಂಡಾ ಕಾಯ್ದೆಯಡಿ ಬಂಧಿಸಲು ಕಮಿಷನರ್ ಅವರಿಗೆ ಪ್ರಸ್ತಾವ ಸಲ್ಲಿಸಲಾಗಿತ್ತು. ಅದಕ್ಕೆ ಒಪ್ಪಿಗೆ ಸಿಗುತ್ತಿದ್ದಂತೆ ರೌಡಿಯನ್ನು ಬಂಧಿಸಿ ಒಂದು ವರ್ಷ ಜೈಲು ವಾಸಕ್ಕೆ ಕಳುಹಿಸಲಾಗಿದೆ’ ಎಂದುತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT