ಬೆಂಗಳೂರು: ಗುಂಡೂರಾವ್ ಅವರು ಮುಖ್ಯಮಂತ್ರಿಯಾಗಿದ್ದಾಗ ದಕ್ಷ ಆಡಳಿತವನ್ನು ನೀಡಿದ್ದರು. ಪ್ರಭಾವಿ ನಾಯಕರಾಗಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಮಾಜಿ ಮುಖ್ಯಮಂತ್ರಿ ದಿ.ಆರ್ ಗುಂಡೂರಾವ್ ಅವರ ಪುತ್ಥಳಿಯನ್ನು ಮೆಜೆಸ್ಟಿಕ್ ಬಸ್ ನಿಲ್ದಾನ ಬಳಿಯ ವೃತ್ತದಲ್ಲಿ ಬುಧವಾರ ಅನಾವರಣಗೊಳಿಸಿ, ಗುಂಡೂರಾವ್ ವೃತ್ತ ಎಂದು ನಾಮಕರಣ ಮಾಡಿದ ಬಳಿಕ ಅವರು ಮಾತನಾಡಿದರು.

ರಾಜ್ಯದ ಮುಖ್ಯಮಂತ್ರಿಯಾಗಿ ಗುಂಡೂರಾವ್ ಅವರು ಉತ್ತಮ ಕೆಲಸಗಳನ್ನು ಮಾಡಿದ್ದರು. ಯಾರನ್ನೂ ಜಾತಿಯಿಂದ ಅಳೆಯದೇ ಜನಪರ ಕೆಲಸಗಳಿಗೆ ಸದಾ ಸ್ಪಂದಿಸುತ್ತಿದ್ದರು. ಇಂದಿರಾ ಗಾಂಧಿ, ಸಂಜಯ್ ಗಾಂಧಿಗೆ ಅವರಿಗೆ ಅತ್ಯಂತ ಆಪ್ತರಾಗಿದ್ದ ಗುಂಡೂರಾವ್ ಅವರು ಧೈರ್ಯದಿಂದ ದಿಟ್ಟ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದರು. ವಿಶೇಷವಾಗಿ ಶಾಸಕರ ಒತ್ತಡಕ್ಕೆ ಮಣಿಯುತ್ತಿರಲಿಲ್ಲ. ವರ್ಗಾವಣೆ ದಂಧೆಗೆ ಕಡಿವಾಣ ಹಾಕಿದ್ದರು ಎಂದು ಹೇಳಿದರು.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ‘ಅತ್ಯಂತ ಕಿರಿಯ ವಯಸ್ಸಿನಲ್ಲೇ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಗುಂಡೂರಾವ್ ಅವರು 40 ವರ್ಷಗಳ ಹಿಂದೆಯೇ ಬೆಂಗಳೂರು ನಗರದ ಬೆಳವಣಿಗೆಯ ದೂರದೃಷ್ಟಿಯಿಟ್ಟುಕೊಂಡು ಮೆಜೆಸ್ಟಿಕ್ ಬಸ್ ನಿಲ್ದಾಣವನ್ನು ನಿರ್ಮಿಸಿದ್ದರು’ ಎಂದರು.

‘ದೇವರಾಜ ಅರಸು ಅವರ ಸಂಪುಟದಲ್ಲಿ ಸಚಿವರಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ಬೆಂಗಳೂರು ನಗರದ ಬೆಳವಣಿಗೆಗೆ, ತಾಂತ್ರಿಕ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದರು. ಮೆಡಿಕಲ್, ಎಂಜಿನಿಯರಿಂಗ್ ಕಾಲೇಜುಗಳನ್ನು ನೀಡಿದ್ದರು. ಕಾವೇರಿ ಹಂತ - 2, ರೈತರಿಗೆ ಉಚಿತ ವಿದ್ಯುತ್, ವಿಧಾನ ಸೌಧದ ಎದುರು ಅಂಬೇಡ್ಕರ್ ಪ್ರತಿಮೆ ನಿರ್ಮಾಣ, ಜಂಗಲ್ ಲಾಡ್ಜ್ಗಳ ಮೂಲಕ ಪ್ರವಾಸೋದ್ಯಮಕ್ಕೆ ಪ್ರೋತ್ಸಾಹ ನೀಡಿದ್ದರು. ಮೊದಲ ವಿಶ್ವ ಕನ್ನಡ ಸಮ್ಮೇಳನ ನಡೆಸುವುದು ಸೇರಿದಂತೆ ಹಲವು ಉತ್ತಮ ಕಾರ್ಯಗಳನ್ನು ಮಾಡಿದ್ದರು’ ಎಂದು ಸ್ಮರಿಸಿದರು.

ಸಣ್ಣ ನೀರಾವರಿ ಸಚಿವ ಎನ್.ಎಸ್. ಬೋಸರಾಜು, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್, ವಿಧಾನಸಭೆಯ ಮುಖ್ಯ ಸಚೇತಕ ಅಶೋಕ್ ಪಟೇಲ್, ಶಾಸಕರು, ಮಾಜಿ ಶಾಸಕರು, ಗುಂಡೂರಾವ್ ಅವರ ಒಡನಾಡಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.