ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರು ಪಂಚಾಕ್ಷರ ಸಂಗೀತೋತ್ಸವ

nadeda karyakrama
Last Updated 7 ಸೆಪ್ಟೆಂಬರ್ 2018, 19:30 IST
ಅಕ್ಷರ ಗಾತ್ರ

ಚಾಮರಾಜಪೇಟೆಯಲ್ಲಿ ಈಚೆಗೆ ಶ್ರೀಗುರುಕುಮಾರ ಪಂಚಾಕ್ಷರೇಶ್ವರ ಸಂಗೀತ ಕಲಾ ವೇದಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರು ಪಂಚಾಕ್ಷರ ಸಂಗೀತೋತ್ಸವ 2018 ಹಾಗೂ ಪಂಚಾಕ್ಷರ ಕೃಪಾಭೂಷಣ ಪ್ರಶಸ್ತಿ ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕಿ ಸರೋಜಾ ಬೋಧನಕರ್ ಲಾತೂರ್ ಹಾಗೂ ಖ್ಯಾತ ತಬಲಾ ವಾದಕ ರತ್ನದೀಪ್ ಜೋಶಿ ಲಾತೂರ್ ಅವರಿಗೆ ‘ಪಂಚಾಕ್ಷರ ಕೃಪಾಭೂಷಣ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಚಿಂಚೋಳಿ ಶಾಸಕ ಉಮೇಶ್ ಜಾಧವ್ ಕಾರ್ಯಕ್ರಮ ಉದ್ಘಾಟಿಸಿದರು. ಶಿಕ್ಷಣ ತಜ್ಞೆ ಹಾಗೂ ಜಿ.ಆರ್. ಶಿಕ್ಷಣ ಸಂಸ್ಥೆಯ ಸಂಸ್ಥಾಪಕಿ ಡಾ.ಗೀತಾ ರಾಮಾನುಜಂ ಅಧ್ಯಕ್ಷತೆ ವಹಿಸಿದ್ದರು. ವಾಸ್ಕ್ ಯೋಗ ಕೇಂದ್ರದ ಸಂಸ್ಥಾಪಕ ಉಮಾಮಹೇಶ್ವರ ಗುರೂಜಿ ಹಾಗೂ ತಬಲಾ ವಾದಕ ಸತೀಶ್ ಹಂಪಿಹೊಳಿ, ಶ್ರೀಗುರುಕುಮಾರ ಪಂಚಾಕ್ಷರೇಶ್ವರ ಸಂಗೀತ ಕಲಾವೇದಿಕೆ ಅಧ್ಯಕ್ಷ ನಾಗೇಂದ್ರ ಟಿ.ರಾಣಾಪೂರ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಂಸ್ಠೆಯ ವಿದ್ಯಾರ್ಥಿಗಳು ಹಾಡು ಮತ್ತು ನೃತ್ಯ ಕಾರ್ಯಕ್ರಮ ನಡೆಸಿಕೊಟ್ಟರು. ಶ್ರೀನಿವಾಸ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT