ಅವ್ಯವಹಾರ ಪ್ರಕರಣ | ಸಿಬಿಐ ತನಿಖೆಗೆ ಆಗ್ರಹ: ಸಹಿ ಸಂಗ್ರಹ ಅಭಿಯಾನ
ಬೆಂಗಳೂರು: ‘ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ – ಆಪರೇಟಿವ್ ಲಿಮಿಟೆಡ್ ಅವ್ಯವಹಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿ ಬ್ಯಾಂಕ್‌ನ ಠೇವಣಿದಾರರು ನಗರದಲ್ಲಿ ಮಂಗಳವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.
ಬಸನಗುಡಿಯಲ್ಲಿರುವ ಕಚೇರಿ ಎದುರು ಸೇರಿದ್ದ ಠೇವಣಿದಾರರು, ಭಿತ್ತಿಪತ್ರಗಳನ್ನು ಹಿಡಿದು ಕೆಲ ಹೊತ್ತು ಪ್ರತಿಭಟನೆ ಸಹ ನಡೆಸಿದರು.
‘ವಂಚನೆ ಪ್ರಕರಣ ನಡೆದು ಮೂರು ವರ್ಷವಾಗಿದೆ. ಠೇವಣಿದಾರರು ಹಾಗೂ ಷೇರುದಾರರಿಗೆ ಇದುವರೆಗೂ ನ್ಯಾಯ ಸಿಕ್ಕಿಲ್ಲ. ಹೀಗಾಗಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ನಾವೆಲ್ಲರೂ ಸಹಿ ಸಂಗ್ರಹ ಮಾಡುತ್ತಿದ್ದೇವೆ. ಸಹಿಯುಳ್ಳ ಮನವಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಲಾಗುವುದು’ ಎಂದು
ಪ್ರತಿಭಟನಕಾರರು ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.