ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಲೋಪಗಳಾಗುತ್ತಿವೆ: ಕುಮಾರಸ್ವಾಮಿ

7

ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಲೋಪಗಳಾಗುತ್ತಿವೆ: ಕುಮಾರಸ್ವಾಮಿ

Published:
Updated:

ಬೆಂಗಳೂರು: ‘ಬಡವರಿಗೆ ರೂಪಿಸಲಾಗಿರುವ ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಲೋಪಗಳಾಗುತ್ತಿವೆ’ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಸಹಾಯಕತೆ ವ್ಯಕ್ತಪಡಿಸಿದರು.

ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಮತ್ತು ರಾಜ್ಯ ವಿಜ್ಞಾನ ಮತ್ತು ತಂತ್ರವಿದ್ಯಾ ಮಂಡಳಿ ಆಶ್ರಯದಲ್ಲಿ ನಗರದ ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಸರ್‌ ಎಂ.ವಿಶ್ವೇಶ್ವರಯ್ಯ, ಡಾ.ರಾಜಾರಾಮಣ್ಣ, ಸರ್‌ ಸಿ.ವಿ.ರಾಮನ್‌, ಪ್ರೊ.ಸತೀಶ್‌ ಧವನ್‌, ಡಾ.ಕಲ್ಪನಾ ಚಾವ್ಲಾ ಹೆಸರಿನಲ್ಲಿರುವ ವಿಜ್ಞಾನಿ ಮತ್ತು ಎಂಜಿನಿಯರ್‌ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು. 

‘ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಸಾಲ ಸೌಲಭ್ಯವೇನೋ ಇದೆ. ಆದರೆ, ಅದು ಎಷ್ಟು ಜನರಿಗೆ ತಲುಪುತ್ತಿದೆ? ಎಂಜಿನಿಯರಿಂಗ್‌, ವೈದ್ಯಕೀಯ ಕೋರ್ಸ್‌ಗಳೂ ತೀರಾ ದುಬಾರಿಯಾಗಿದ್ದು ಕೈಗೆಟುಕದಂತಾಗಿದೆ. ಇಂಥ ಸನ್ನಿವೇಶ ಇರುವಾಗ ವಿದ್ಯಾರ್ಥಿಗಳು ಹೇಗೆ ಉನ್ನತ ಶಿಕ್ಷಣ ಪಡೆಯಬೇಕು? ಆದ್ದರಿಂದ ಯುವಜನರು ಕೇವಲ ಎಂಜಿನಿಯರಿಂಗ್‌, ವೈದ್ಯಕೀಯದತ್ತ ವಾಲದೆ ಮೂಲ ವಿಜ್ಞಾನ ಓದುವತ್ತ ಆಸಕ್ತಿ ವಹಿಸಬೇಕು. ಅಂಥವರಿಗೆ ರಾಜ್ಯ ಸರ್ಕಾರ ನಿರಂತರ ಪ್ರೋತ್ಸಾಹ ನೀಡಲಿದೆ’ ಎಂದು ಹೇಳಿದರು. 

‘ವಿಜ್ಞಾನ, ತಂತ್ರಜ್ಞಾನ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಜತೆ ನೀಡಲಾಗುವ ಗೌರವಧನವನ್ನು ₹ 50 ಸಾವಿರಕ್ಕೆ ಏರಿಸಲಾಗಿದೆ. ಆದರೆ, ನಿಮ್ಮ (ವಿಜ್ಞಾನಿಗಳ) ಕೊಡುಗೆಯನ್ನು ಈ ಹಣದಿಂದ ಅಳೆಯಲಾಗದು’ ಎಂದರು.

ಸಚಿವ ಕೆ.ಜೆ.ಜಾರ್ಜ್‌ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನಿ ಪ್ರೊ.ಸಿ.ಎನ್‌.ಆರ್‌.ರಾವ್‌, ಐಐಎಸ್‌ಸಿ ನಿರ್ದೇಶಕ ಪ್ರೊ.ಅನುರಾಗ್‌ ಕುಮಾರ್‌ ಇದ್ದರು.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !