ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌–ಬಿಜೆಪಿ ಮೈತ್ರಿ | ಎಚ್‌.ಡಿ. ಕುಮಾರಸ್ವಾಮಿ ಇಂದು ದೆಹಲಿಗೆ

Published 16 ಜನವರಿ 2024, 23:30 IST
Last Updated 16 ಜನವರಿ 2024, 23:30 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರು ಬುಧವಾರ ದೆಹಲಿಗೆ ತೆರಳಲಿದ್ದಾರೆ.

ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‌ಗೆ ಚುನಾವಣೆಗೆ ಮೊದಲೇ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂಬ ಮಾತು ರಾಜಕೀಯ ವಲಯದಲ್ಲಿ ಕೆಲವು ದಿನಗಳಿಂದ ಚರ್ಚೆಗೆ ಗ್ರಾಸವಾಗಿತ್ತು. ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಯೂ ಸದ್ದು ಮಾಡಿತ್ತು.

‘ಕುಮಾರಸ್ವಾಮಿ ಮತ್ತು ಅವರ ಮಗ ನಿಖಿಲ್‌ ಕುಮಾರಸ್ವಾಮಿ ಇಬ್ಬರೂ ಬುಧವಾರ ದೆಹಲಿಗೆ ತೆರಳಲಿದ್ದಾರೆ. ಅಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಚರ್ಚಿಸುವ ಸಾಧ್ಯತೆ ಇದೆ. ಸಂಪುಟದಲ್ಲಿ ಸ್ಥಾನ ನೀಡುವ ಕುರಿತು ಯಾವುದೇ ಮಾಹಿತಿ ಇಲ್ಲ’ ಎಂದು ಕುಮಾರಸ್ವಾಮಿ ಅವರ ಆಪ್ತ ಮೂಲಗಳು ತಿಳಿಸಿವೆ.

ಗುರುವಾರ ಅಥವಾ ಶುಕ್ರವಾರ ಕುಮಾರಸ್ವಾಮಿ ಅವರು ದೆಹಲಿಯಿಂದ ಬೆಂಗಳೂರಿಗೆ ವಾಪಸಾಗುವರು. ನಂತರ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಉತ್ತರ ಪ್ರದೇಶಕ್ಕೆ ತೆರಳುವರು ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT