ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಖಾಸಗಿ ಸಾರಿಗೆ ವ್ಯವಸ್ಥೆಗೆ ನೆರವು ಕೊಡಿ: ಎಚ್‌.ಡಿ. ಕುಮಾರಸ್ವಾಮಿ

Published : 11 ಸೆಪ್ಟೆಂಬರ್ 2023, 16:16 IST
Last Updated : 11 ಸೆಪ್ಟೆಂಬರ್ 2023, 16:16 IST
ಫಾಲೋ ಮಾಡಿ
Comments

ಬೆಂಗಳೂರು: ‘ರಾಜ್ಯ ಸರ್ಕಾರ ಜಾರಿಗೊಳಿಸಿರುವ ಅರೆ ಬೆಂದ ‘ಶಕ್ತಿ’ ಯೋಜನೆಯಿಂದ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ. ಈ ಕ್ಷೇತ್ರದಲ್ಲಿ ಸಂಕಷ್ಟದಲ್ಲಿ ಸಿಲುಕಿರುವವರಿಗೆ ಸರ್ಕಾರ ನೆರವು ಕೊಡಬೇಕು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಸೋಮವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಅಡ್ಡ ಪರಿಣಾಮದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ ಮತ್ತು ಪಕ್ಷಪಾತದಿಂದ ಅರಾಜಕತೆ ಸೃಷ್ಟಿಯಾಗಿದೆ’ ಎಂದು ದೂರಿದ್ದಾರೆ.

ಸಾಲ ಮಾಡಿ ಆಟೊ ರಿಕ್ಷಾ, ಕ್ಯಾಬ್‌ ಓಡಿಸಿ ಜೀವನ ನಡೆಸುತ್ತಿದ್ದವರು ಬೀದಿ ಪಾಲಾಗಿದ್ದಾರೆ. ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿದ್ದ ಖಾಸಗಿ ಬಸ್‌ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಈ ಕ್ಷೇತ್ರವನ್ನು ನಂಬಿದ್ದ ಅನೇಕರ ಜೀವನಕ್ಕೆ ‘ಗ್ಯಾರಂಟಿ’ ಇಲ್ಲವಾಗಿದೆ ಎಂದು ಟೀಕಿಸಿದ್ದಾರೆ.

ಈ ವಿಚಾರದಲ್ಲಿ ಸರ್ಕಾರ ಪ್ರತಿಷ್ಠೆ ಪ್ರದರ್ಶಿಸಬಾರದು. ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಮಾನವೀಯತೆಯಿಂದ ಪರಿಶೀಲಿಸಿ, ಈಡೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT