ಬೆಂಗಳೂರು: ಕಾಂಬೋಡಿಯಾ ದೇಶದ ಒಳಾಡಳಿತ ಸಚಿವಾಲಯದ ಅಧಿಕೃತ ಆಹ್ವಾನದ ಮೇರೆಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮಂಗಳವಾರ ಅಲ್ಲಿನ ರಾಜಧಾನಿ ಪ್ನೊಮ್ ಪೆನ್ ಪ್ರವಾಸಕ್ಕೆ ತೆರಳಿದ್ದಾರೆ.

‘ಪ್ನೊಮ್ ಪೆನ್ ವಿಮಾನ ನಿಲ್ದಾಣದಲ್ಲಿ ಇಳಿದ ಕುಮಾರಸ್ವಾಮಿ ಅವರನ್ನು ಅಲ್ಲಿನ ಒಳಾಡಳಿತ ಸಚಿವಾಲಯದ ಮಹಾ ಪ್ರಧಾನ ಕಾರ್ಯದರ್ಶಿ ಕೆಮ್ ಚೀಟ್ ಸ್ವಾಗತಿಸಿದರು. ಅವರ ಸಲಹೆಗಾರ ಎಸ್. ಸರ್ಜುದ್ದೀನ್ ಕೂಡ ಇದ್ದರು’ ಎಂದು ಕುಮಾರಸ್ವಾಮಿ ಅವರ ಕಚೇರಿ ಪ್ರಕಟಣೆ ತಿಳಿಸಿದೆ.

ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಮಾಜಿ ಶಾಸಕರಾದ ಸಾ.ರಾ. ಮಹೇಶ್, ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಎಚ್.ಎಂ. ರಮೇಶ್ ಗೌಡ, ಚೌಡರೆಡ್ಡಿ ತೂಪಲ್ಲಿ ಅವರೂ ಕುಮಾರಸ್ವಾಮಿ ಅವರೊಂದಿಗೆ ಪ್ರವಾಸಕ್ಕೆ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.