ಎಚ್.ಡಿ. ಕುಮಾರಸ್ವಾಮಿ– ಬಿ.ಎಸ್. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಭೇಟಿ ಮಾಡಿ, ದಾಸರಹಳ್ಳಿಯಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.
ಮೈತ್ರಿ ಸರ್ಕಾರ ಪತನವಾದ ಬಳಿಕ ಇದೇ ಮೊದಲ ಬಾರಿಗೆ ಇಬ್ಬರ ಭೇಟಿ ಆಗಿದೆ. ಇದಕ್ಕೆ ಕೆಲವರು ರಾಜಕೀಯ ಬಣ್ಣ ನೀಡಿದರೂ, ರಾಜಕೀಯದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ತಕ್ಷಣವೇ ಆಗಬೇಕಾಗಿರುವ ಕೆಲಸಗಳು ಮತ್ತು ರಾಮನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆಗೆ ಬಂದಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಸಿವೆ.
ಇಬ್ಬರೂ ನಾಯಕರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಬಳಿಕ ಕುಮಾರಸ್ವಾಮಿ ಸುದ್ದಿಗಾರರ ಜತೆ ಮಾತನಾಡಿ, ಮಳೆಯಿಂದ ದಾಸರಹಳ್ಳಿ ಕ್ಷೇತ್ರದಲ್ಲಿ ಭಾರಿ ಹಾನಿ ಆಗಿರುವುದರಿಂದ ಪರಿಹಾರ ಒದಗಿಸುವುದೂ ಸೇರಿ ವಿವಿಧ ವಿಷಯ ಕುರಿತು ಚರ್ಚಿಸಲು ಬಂದಿದ್ದಾಗಿ ತಿಳಿಸಿದರು.
ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಜುನಾಥ್ ಅವರೂ ಕುಮಾರಸ್ವಾಮಿ ಜತೆಗಿದ್ದರು. ನಗರದಲ್ಲಿ ಮಂಜುನಾಥ್ ಜೆಡಿಎಸ್‌ನಿಂದ ಗೆದ್ದಿರುವ ಏಕೈಕ ಶಾಸಕ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.