ಭಾನುವಾರ, ಜೂಲೈ 5, 2020
27 °C

ಖರೀದಿ ಅಕ್ರಮ: ಲೆಕ್ಕಪತ್ರ ಸಮಿತಿ ತನಿಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ ನಿರ್ವಹಣೆಗೆಂದು ಖರೀದಿಸಿದ ವೈದ್ಯಕೀಯ ಉಪಕರಣಗಳಲ್ಲಿ ಅಕ್ರಮ ನಡೆದಿದೆ ಎಂಬ ದೂರು ಬಂದಿರುವುದರಿಂದ ತನಿಖೆ ನಡೆಸಲು ನಿರ್ಧರಿಸಿರುವುದಾಗಿ ವಿಧಾನಮಂಡಲ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಅಧ್ಯಕ್ಷ ಎಚ್‌.ಕೆ.ಪಾಟೀಲ ತಿಳಿಸಿದರು.

ಈ ಸಂಬಂಧ ಮಂಗಳವಾರ ಸಮಿತಿ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಪರೀಕ್ಷಾ ಕಿಟ್‌ಗಳು, ವೆಂಟಿಲೇಟರ್‌, ಗ್ಲೌಸ್‌, ಪಿಇಪಿ, ರ್‍ಯಾಪಿಡ್‌ ಟೆಸ್ಟ್‌ ಕಿಟ್‌  ಮುಂತಾದವುಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸಮಿತಿ ಸದಸ್ಯರು ಇದೇ 28 ರಂದು ವಿವಿಧ ಆಸ್ಪತ್ರೆಗಳು, ಕ್ವಾರಂಟೈನ್‌ ಕೇಂದ್ರಗಳು, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುವುದು ಎಂದು ಅವರು ಹೇಳಿದರು.

ಅಲ್ಲದೆ, ಸಂಬಂಧಪಟ್ಟ ಇಲಾಖೆಗಳಿಂದಲೂ ಮಾಹಿತಿಯನ್ನು ಕೇಳಲಾಗಿದೆ. ವಿಧಾನಮಂಡಲದ ಕಾರ್ಯ ವಿಧಾನ ನಡವಳಿಕೆ 264 (1) ಅನ್ವಯ ತನಿಖೆ ನಡೆಸುವ ಅಧಿಕಾರ ಸಮಿತಿಗೆ ಇದೆ ಎಂದೂ ಪಾಟೀಲ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು