ಬುಧವಾರ, ಮಾರ್ಚ್ 29, 2023
32 °C

ಹ್ಯಾಕರ್ ಶ್ರೀಕೃಷ್ಣ ಪ್ರಕರಣ: ಪೊಲೀಸ್ ಕಸ್ಟಡಿಗೆ ಇನ್ನೊಬ್ಬ ಆರೋಪಿ ವಿಷ್ಣು ಭಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಪ್ರಕರಣದಲ್ಲಿ ಬಂಧಿಸಲಾಗಿದ್ದ ಅಂತರರಾಷ್ಟ್ರೀಯ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿಯನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇನ್ನೊಬ್ಬ ಆರೋಪಿ ವಿಷ್ಣು ಭಟ್‌ನನ್ನು ಮುಂದಿನ 4 ದಿನಗಳವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಜೀವನ್‌ಬಿಮಾನಗರ ಠಾಣೆ ವ್ಯಾಪ್ತಿಯ ಹೋಟೆಲ್‌ನಲ್ಲಿ ವಾಸವಿದ್ದ ಆರೋಪಿಗಳು, ಸಿಬ್ಬಂದಿ ಹಾಗೂ ವ್ಯವಸ್ಥಾಪಕನ ಮೇಲೆ ಹಲ್ಲೆ ಮಾಡಿದ್ದರು. ವ್ಯವಸ್ಥಾಪಕ ನೀಡಿದ್ದ ದೂರಿನಡಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಆರೋಪಿಗಳು ಮಾದಕ ದ್ರವ್ಯ ಸೇವಿಸಿದ್ದು ಗೊತ್ತಾಗಿತ್ತು.

ಎನ್‌ಡಿಪಿಎಸ್ ಕಾಯ್ದೆಯಡಿಯೂ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಇಬ್ಬರ ಮನೆಗಳ ಮೇಲೂ ದಾಳಿ ಮಾಡಿದ್ದರು. ಡ್ರಗ್ಸ್ ಸಹ ಪತ್ತೆ ಹಚ್ಚಿದ್ದರು.

‘ಆರೋಪಿ ವಿಷ್ಣು ಭಟ್‌ನ ಇಂದಿರಾನಗರದ ಮನೆಯಲ್ಲಿ ಡ್ರಗ್ಸ್ ಸಿಕ್ಕಿದೆ. ಅದನ್ನು ಆತ ಎಲ್ಲಿಂದ ತರಿಸಿದ್ದ? ಡ್ರಗ್ಸ್ ಪೂರೈಸಿದ್ದ ಪೆಡ್ಲರ್ ಯಾರು? ಎಂಬುದನ್ನು ಪತ್ತೆ ಮಾಡಬೇಕಿದೆ. ಹೀಗಾಗಿ, ಆತನನ್ನು ಕಸ್ಟಡಿಗೆ ನೀಡುವಂತೆ ನ್ಯಾಯಾಲಯವನ್ನು ಕೋರಲಾಗಿತ್ತು. ನಮ್ಮ ಮನವಿಯನ್ನು ನ್ಯಾಯಾಲಯ ಮನ್ನಿಸಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಮತ್ತಷ್ಟು ಮಂದಿಗೆ ನೋಟಿಸ್: ವಿಷ್ಣು ಭಟ್‌ ಜೊತೆ ಪಾರ್ಟಿಗಳಲ್ಲಿ ಪಾಲ್ಗೊಂಡು ಡ್ರಗ್ಸ್ ಸೇವಿಸುತ್ತಿದ್ದವರ ಹಾಗೂ ಡ್ರಗ್ಸ್ ಮಾರುತ್ತಿದ್ದವರ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಪಟ್ಟಿ ಸಿದ್ಧಪಡಿಸಿ ಎಲ್ಲರಿಗೂ ನೋಟಿಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು