ಮಂಗಳವಾರ, ಸೆಪ್ಟೆಂಬರ್ 21, 2021
21 °C

ಎಚ್‌ಎಎಲ್‌: ಮತ್ತೆ ಎರಡು ಆಂಬುಲೆನ್ಸ್ ಹಸ್ತಾಂತರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕಿತರನ್ನು ಆಸ್ಪತ್ರೆಗಳಿಗೆ ಸ್ಥಳಾಂತರಿಸಲು ಹಾಗೂ ವಿವಿಧ ವೈದ್ಯಕೀಯ ಸೇವೆಗಳಿಗಾಗಿ ಮತ್ತೆ ಎರಡು ಆಂಬುಲೆನ್ಸ್‌ಗಳನ್ನು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ನಗರದ ಸರ್ಕಾರಿ ಆಸ್ಪತ್ರೆಗಳಿಗೆ ಮಂಗಳವಾರ ಹಸ್ತಾಂತರಿಸಿದೆ. 

ಕೆಲ ದಿನಗಳ ಹಿಂದಷ್ಟೇ ಸಂಸ್ಥೆಯು ಎರಡು ಆಂಬುಲೆನ್ಸ್‌ ಗಳನ್ನು ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಗೆ ಹಸ್ತಾಂತರಿಸಿತ್ತು. ವಿಕ್ಟೋರಿಯಾ ಆಸ್ಪತ್ರೆ ಆವರಣದ ನೆಪ್ರೊ  ಯುರಾಲಜಿ ಸಂಸ್ಥೆ ಹಾಗೂ ಇಂದಿರಾನಗರದ ಸರ್ ಸಿ.ವಿ. ರಾಮನ್ ಸಾರ್ವಜನಿಕ ಆಸ್ಪತ್ರೆಗೆ ತಲಾ ಒಂದು ಆಂಬುಲೆನ್ಸ್‌ ನೀಡಿದೆ.

 ಆಂಬುಲೆನ್ಸ್‌ನಲ್ಲಿ ಆಮ್ಲಜನಕ ವಿತರಣಾ ವ್ಯವಸ್ಥೆ, ವೈದ್ಯರಿಗೆ ಪ್ರತ್ಯೇಕ ಆಸನ ಸೇರಿದಂತೆ ವಿವಿಧ ಸೌಲಭ್ಯಗಳಿವೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು