ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಶಾಂತಿ ಸೃಷ್ಟಿಸಲು ಯತ್ನ: ಕಮಿಷನರ್‌ಗೆ ದೂರು

Last Updated 1 ಏಪ್ರಿಲ್ 2022, 14:36 IST
ಅಕ್ಷರ ಗಾತ್ರ

ಬೆಂಗಳೂರು: ‘ಹಲಾಲ್ ಹಾಗೂ ಜಟ್ಕಾ ಬಗ್ಗೆ ಜನರಲ್ಲಿ ಗೊಂದಲ ಸೃಷ್ಟಿಸುತ್ತಿರುವ ಕೆಲವರು, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ಇವರ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಬೇಕು’ ಎಂದು ಒತ್ತಾಯಿಸಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ.ರಂಗನಾಥ್ ನೇತೃತ್ವದ ನಿಯೋಗವು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಅವರಿಗೆ ಶುಕ್ರವಾರ ದೂರು ಸಲ್ಲಿಸಿದೆ.

ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮಿಷನರೇಟ್ ಕಚೇರಿಗೆ ಬಂದಿದ್ದ ನಿಯೋಗ, ಕಮಲ್ ಪಂತ್ ಅವರಿಗೆ ದೂರಿನ ಪ್ರತಿ ನೀಡಿತು. ದೂರು ಪರಿಶೀಲಿಸಿ ಕ್ರಮ ಜರುಗಿಸುವುದಾಗಿ ಕಮಿಷನರ್ ಭರವಸೆ ನೀಡಿದರು.

‘ದೇಶದ ಎಲ್ಲ ಕೋಮಿನ ಜನರಿಗೆ ವ್ಯಾಪಾರ, ವಹಿವಾಟು ನಡೆಸಲು ಸಂವಿಧಾನ ಸ್ವಾತಂತ್ರ್ಯ ನೀಡಿದೆ. ಆದರೆ, ನಗರದ ಹಲವೆಡೆ ಹಲಾಲ್ ಹೆಸರಿನಲ್ಲಿ ವ್ಯಾಪಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಕೆಲ ಸಂಘಟನೆಗಳ ಹೆಸರಿನಲ್ಲಿ ಸುತ್ತಾಡುತ್ತಿರುವ ಪುನೀತ್ ಕೆರೆಹಳ್ಳಿ, ಪ್ರಶಾಂತ್ ಸಂಬರಗಿ ಹಾಗೂ ಇತರರು, ವ್ಯಾಪಾರಿಗಳಿಗೆ ಬೆದರಿಕೆಯೊಡ್ಡುತ್ತಿದ್ದಾರೆ. ಕರಪತ್ರಗಳನ್ನು ಹಂಚಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ’ ಎಂದು ದೂರಿನಲ್ಲಿ ತಿಳಿಸಲಾಗಿದೆ.

‘ಬೆಂಗಳೂರು ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಕೋಳಿ ಹಾಗೂ ಕುರಿ ಮಾಂಸ ಮಾರಾಟ ಮಳಿಗೆಗಳಿವೆ. ಹಲಾಲ್ ಮಾಂಸ ನಿಷೇದಿಸಬೇಕೆಂದು ಆಗ್ರಹಿಸುತ್ತಿರುವ ಕೆಲವರು, ಆ ಬಗ್ಗೆ ಜನರನ್ನು ಪ್ರಚೋದಿಸುವ ಕಲಸ ಮಾಡುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ’ ಎಂದೂ ಉಲ್ಲೇಖಿಸಲಾಗಿದೆ.

‘ಆಲ್‌ ಇಂಡಿಯಾ ಲಾಯರ್ ಅಸೋಸಿಯೇಷನ್ ಫಾರ್ ಜಸ್ಟೀಸ್’ ಪದಾಧಿಕಾರಿಗಳು ಹಾಗೂವಕೀಲ ಎಸ್. ಬಾಲನ್ ನಿಯೋಗದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT