ಕೆ.ಆರ್.ಪುರ: ಕೇಂದ್ರ ಸರ್ಕಾರದ ಪಂಚಾಯತ್ರಾಜ್ ಸಚಿವಾಲಯ ಪ್ರಕಟಿಸುವ ದೀನ್ ದಯಾಳ್ ಉಪಾಧ್ಯಾಯ ಪಂಚಾಯತ್ರಾಜ್ ಅಭಿವೃದ್ಧಿ ಪುರಸ್ಕಾರಕ್ಕೆ ಪೂರ್ವ ತಾಲ್ಲೂಕಿನ ಹಾಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಪಾತ್ರವಾಗಿದೆ. ಅಭಿವೃದ್ಧಿಗೆ ಪ್ರೋತ್ಸಾಹ ಧನವಾಗಿ ₹75 ಲಕ್ಷ ನೀಡಲಾಗಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರತಿ ಹಳ್ಳಿಯ ಮಗುವಿನ ಆರೋಗ್ಯ, ಶಿಕ್ಷಣ, ಸುರಕ್ಷತೆ ಮತ್ತು ಸಮಗ್ರ ಅಭಿವೃದ್ಧಿಯನ್ನು ಕೈಗೊಂಡು ಮಕ್ಕಳ ಕಲ್ಯಾಣಕ್ಕೆ ಒತ್ತು ನೀಡುತ್ತಿರುವ ಕಾರಣಕ್ಕೆ ಮಕ್ಕಳ ಸ್ನೇಹಿ ಪಂಚಾಯಿತಿ ವರ್ಗದಲ್ಲಿ ನಾಮನಿರ್ದೇಶನಗೊಂಡಿದೆ.

ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಡಿಜಿಟಲ್ ಪರಿವರ್ತನೆ ಮತ್ತು ಸ್ಮಾರ್ಟ್ ಮೂಲಸೌಕರ್ಯ ಒದಗಿಸುವ ಮೂಲಕ ಡಿಜಿಟಲೀಕರಣಗೊಳಿಸಲಾಗಿದೆ. ಮಕ್ಕಳಿಗೆ 360 ಡಿಗ್ರಿ ಅಭಿವೃದ್ಧಿಯ ಮಾದರಿಯನ್ನು ಸಾಂಸ್ಥಿಕಗೊಳಿಸಿ ಮಕ್ಕಳ ಸಮಗ್ರ ಬೆಳವಣಿಗೆಗೆ ಕಾರಣವಾಗಿದೆ.

ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಲೆ ಹಾಗೂ ಅಂಗನವಾಡಿಯಲ್ಲಿ ಕಂಪ್ಯೂಟರ್ ಪ್ರಯೋಗಾಲಯ, ಸಿಸಿಟಿವಿ ಕಣ್ಗಾವಲು ಮತ್ತು ಅಧುನಿಕ ಕಲಿಕೆ, ರಂಗಮಂದಿರ, ಉಪಾಹಾರ ಕೊಠಡಿ, ಹೊಸ ತರಗತಿ ಕೊಠಡಿ ಹಾಗೂ ಆಟದ ಮೈದಾನಗಳ ವ್ಯವಸ್ಥೆ ಮಾಡಲಾಗಿದೆ. ಮಕ್ಕಳಿಗೆ ಸಮವಸ್ತ್ರ ಕಲಿಕಾ ಸಾಮಾಗ್ರಿ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಅನ್ನು ನೀಡಲಾಗಿದೆ.

ಈ ಪಂಚಾಯಿತಿಯು ನಗರ ಕೇಂದ್ರದಿಂದ 18 ಕಿ.ಮೀ. ದೂರದಲ್ಲಿದೆ. ಸುಮಾರು 3 ಕಿ.ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಹರಡಿಕೊಂಡಿರುವ ಇಲ್ಲಿ ಒಟ್ಟು 15,476 ಜನಸಂಖ್ಯೆಯಿದೆ. 15 ಚುನಾಯಿತ ಪ್ರತಿನಿಧಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ಸಿಬ್ಬಂದಿ ಇಲ್ಲಿದ್ದಾರೆ.

‘ಗ್ರಾಮಗಳಲ್ಲಿ ಡಿಜಿಟಲ್ ರೂಪಾಂತರ ಮತ್ತು ಸ್ಮಾರ್ಟ್ ಕ್ಲಾಸ್, ಶೈಕ್ಷಣಿಕ ಬೆಂಬಲ, ಆರೋಗ್ಯ ಪೋಷಣೆ, ನೈರ್ಮಲ್ಯ, ಮಕ್ಕಳ ಹಕ್ಕು ಸುರಕ್ಷತೆ, ಪಠ್ಯಕ್ರಮ, ಸಮುದಾಯ ತೊಡಗಿಕೊಳ್ಳುವಿಕೆ, ಪರಿಸರದ ಜಾಗೃತಿ ಮುಂತಾದ ಅಂಶಗಳನ್ನು ಇಟ್ಟುಕೊಂಡು ಕೇಂದ್ರ ಸರ್ಕಾರ ಪುರಸ್ಕಾರಕ್ಕೆ ಆಯ್ಕೆ ಮಾಡಿ ₹75 ಲಕ್ಷ ಪ್ರೋತ್ಸಾಹ ಧನ ನೀಡಿರುವುದು ಖುಷಿ ನೀಡಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ವಸಂತ್ ಕುಮಾರ್ ಅಭಿಪ್ರಾಯಪಟ್ಟರು.

ಹಾಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಮೊದಲಿನಿಂದಲೂ ಅಭಿವೃದ್ಧಿ ಕಾರ್ಯಗಳ ಜೊತೆಗೆ ಮಕ್ಕಳ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ವಿಶೇಷ ಪ್ರೋತ್ಸಾಹ ನೀಡುತ್ತಾ ಬಂದಿದೆ. ಶಾಲೆ ಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸಲು ಪ್ರೋತ್ಸಾಹಿಸುವುದು, ಮಕ್ಕಳ ಅಧಿವೇಶನ, ಶಿಕ್ಷಣ, ಸ್ವಚ್ಚತೆ, ಪರಿಸರ ಪ್ರಜ್ಞೆಯನ್ನು ಮಕ್ಕಳಲ್ಲಿ ಬೆಳೆಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ಹಾಲನಾಯಕನಹಳ್ಳಿ ಗ್ರಾಮ ಪಂಚಾಯಿತಿ ಮಾತ್ರ ಪುರಸ್ಕಾರಕ್ಕೆ ಪಾತ್ರವಾಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.