ಗುರುವಾರ, 29 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೋಡಿ ಕೊಲೆ: 11 ಮಂದಿ ವಿರುದ್ಧ ಎಫ್‌ಐಆರ್

Published 9 ಫೆಬ್ರುವರಿ 2024, 18:12 IST
Last Updated 9 ಫೆಬ್ರುವರಿ 2024, 18:12 IST
ಅಕ್ಷರ ಗಾತ್ರ

ಬೆಂಗಳೂರು: ಕುಂಬಾರಪೇಟೆ ಮುಖ್ಯರಸ್ತೆಯಲ್ಲಿ ನಡೆದಿದ್ದ ಬಿ.ಎಲ್. ಸುರೇಶ್ (55) ಹಾಗೂ ಮಹೇಂದ್ರ (68) ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 11 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

‘ಕೊಲೆಯಾದ ಸುರೇಶ್‌ ಅವರ ಪುತ್ರಿ ದೂರು ನೀಡಿದ್ದಾರೆ. ಪ್ರಮುಖ ಆರೋಪಿ ಬದ್ರಿಪ್ರಸಾದ್ ಅಲಿಯಾಸ್ ಭದ್ರ ಹಾಗೂ ಇತರರಾದ ಮುನಿಸ್ವಾಮಿ, ರಾಜಪ್ಪ, ಮಹೇಶ್, ವೆಂಕಟೇಶ್, ಚಂದ್ರಶೇಖರ, ರವಿಶಂಕರ್, ಶಶಿಕಲಾ, ಶಿವಕುಮಾರ್, ರಾಮಪ್ಪ ಹಾಗೂ ಚೆನ್ನಕೃಷ್ಣಪ್ಪ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಕುಂಬಾರಪೇಟೆ ಅನ್ನದಾನ ಸಮಿತಿ ಟ್ರಸ್ಟ್ ಹಾಗೂ ಕುಂಬಾರಪೇಟೆ ಆಂಜನೇಯ ಸ್ವಾಮಿ ದೇವಸ್ಥಾನ ಕಟ್ಟಡ ಸಮಿತಿ ಟ್ರಸ್ಟ್‌ ಒಡೆತನದ ಆಸ್ತಿ ಹಾಗೂ ಕೌಟುಂಬಿಕ ಕಾರಣಕ್ಕಾಗಿ ಕೊಲೆ ನಡೆದಿರುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಬದ್ರಿಪ್ರಸಾದ್ ಒಬ್ಬನೇ ಸುರೇಶ್ ಹಾಗೂ ಮಹೇಂದ್ರ ಅವರಿಗೆ ಚಾಕುವಿನಿಂದ ಇರಿದಿದ್ದ. ಇತರರ ಪಾತ್ರವೇನು ಎಂಬುದು ತನಿಖೆಯಿಂದ ತಿಳಿಯಬೇಕಿದೆ’ ಎಂದು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT