ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಲುಮತ ಸಂಸ್ಕೃತಿ ವೈಭವ | ಮೂವರಿಗೆ ಪುರಸ್ಕಾರ: ಎಚ್. ವಿಶ್ವನಾಥ್

Published 5 ಜನವರಿ 2024, 16:01 IST
Last Updated 5 ಜನವರಿ 2024, 16:01 IST
ಅಕ್ಷರ ಗಾತ್ರ

ಬೆಂಗಳೂರು: ರಾಯಚೂರು ಜಿಲ್ಲೆಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಶಾಖಾಮಠ ತಿಂಥಣಿಬ್ರಿಜ್ ಮಠದಲ್ಲಿ ಜ.12ರಿಂದ 14ರ ತನಕ ಹಾಲುಮತ ಸಂಸ್ಕೃತಿ ವೈಭವ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ತಿಳಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘12ರಂದು ನಡೆಯುವ ಯುವಜನ ಸಮಾವೇಶದಲ್ಲಿ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಗುರುಮಹಾಂತೇಶ ಸ್ವಾಮೀಜಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಉದ್ಘಾಟಿಸಿಲಿದ್ದು, ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರ ಸಚಿವರಾದ ಪ್ರಲ್ಹಾದ ಜೋಶಿ, ಭಗವಂತ ಖೂಬಾ ಭಾಗವಹಿಸಲಿದ್ದಾರೆ‘ ಎಂದು ತಿಳಿಸಿದರು.  

‘ಹಾಲುಮತ ಭಾಸ್ಕರ ಪ್ರಶಸ್ತಿ’ಗೆ ಲೇಖಕ ಕಾಂಚ ಐಲಯ್ಯ ಶೆಫರ್ಡ್‌, ‘ಕನಕ ರತ್ನ ಪ್ರಶಸ್ತಿ’ಗೆ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು, ‘ಸಿದ್ದಶ್ರೀ ಪ್ರಶಸ್ತಿ’ಗೆ ಕಾವಾಡಿ ದಂಪತಿ ಬೊಮ್ಮ ಮತ್ತು ಬೆಳ್ಳಿ ಆಯ್ಕೆಯಾಗಿದ್ದಾರೆ. ಪ್ರಶಸ್ತಿಯು ತಲಾ ₹ 50 ಸಾವಿರ ನಗದು, ಸ್ಮರಣಿಕೆ ಒಳಗೊಂಡಿದೆ. ಜ.13ರಂದು ನಡೆಯುವ ಕಾರ್ಯಕ್ರಮದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಪ್ರಿಯಾಂಕ್‌ ಖರ್ಗೆ ಅವರು ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ’ ಎಂದು ಹೇಳಿದರು.

‘14ರಂದು ನಡೆಯುವ ಹಾಲುಮತ ಮಾತೃ ಶಕ್ತಿ ಸಮಾವೇಶದಲ್ಲಿ ಈಶ್ವರಾನಂದಪುರಿ ಸ್ವಾಮೀಜಿ, ಮಲ್ಲಾರಲಿಂಗ ಮಹಾರಾಜ ಸ್ವಾಮೀಜಿ, ಅಡವಿಲಿಂಗ ಮಹಾರಾಜ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ದೇವದುರ್ಗದ ಶಾಸಕಿ ಕರೆಮ್ಮ ನಾಯಕ್ ಸಮಾವೇಶ ಉದ್ಘಾಟಿಸಲಿದ್ದಾರೆ. ವಿಶ್ರಾಂತ ಕುಲಪತಿ ಮಲ್ಲಿಕಾ ಘಂಟಿ ಅಧ್ಯಕ್ಷತೆ ವಹಿಸಲಿದ್ದಾರೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT