ಮಂಗಳವಾರ, ಜನವರಿ 19, 2021
19 °C

₹ 200 ಕೋಟಿ ಪ್ರಸ್ತಾವ ಸಲ್ಲಿಕೆ: ಬೇಳೂರು ರಾಘವೇಂದ್ರ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಎರಡು ವರ್ಷಗಳಲ್ಲಿ ಹೊಸ ಯೋಜನೆಗಳನ್ನು ಅನುಷ್ಠಾನ ಮಾಡಲು ₹ 200 ಕೋಟಿ ಅನುದಾನ ನೀಡುವಂತೆ ಕೇಂದ್ರದ ಜವಳಿ ಸಚಿವಾಲಯಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ಅಧ್ಯಕ್ಷ ಡಾ. ಬೇಳೂರು ರಾಘವೇಂದ್ರ ಶೆಟ್ಟಿ ತಿಳಿಸಿದರು.

ನಿಗಮದ ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿದ ಅವರು, ‘ರಾಜ್ಯದ ಕರಕುಶಲಕರ್ಮಿಗಳಿಗೆ ಆಧುನಿಕ ತಂತ್ರಜ್ಞಾನವನ್ನು ಪರಿಚಯಿಸುವ ಜತೆಗೆ ಮಾರಾಟಕ್ಕೆ ಸೂಕ್ತ ವೇದಿಕೆಯನ್ನು ನಿರ್ಮಿಸಿಕೊಡಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಇದಕ್ಕೆ ಸಕಾರಾತ್ಮಕ ಸ್ಪಂದನೆ ದೊರೆಯುವ ನಿರೀಕ್ಷೆಯಿದೆ. ನಿಗಮದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸಲಾಗುವುದು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.