ಶುಕ್ರವಾರ, ಡಿಸೆಂಬರ್ 13, 2019
24 °C

ವೈದ್ಯರ ಗಲಾಟೆ: ವರದಿ ನೀಡಲು ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ವೈದ್ಯರೊಬ್ಬರು ಕಿರುಕುಳ ನೀಡಿದ್ದಾರೆ’ ಎಂದು ಮಹಿಳಾ ವೈದ್ಯರು ವಿವಿ ಪುರ ಠಾಣೆಯಲ್ಲಿ ದಾಖಲಿಸಿದ ದೂರಿಗೆ ಸಂಬಂಧಿಸಿದಂತೆ ವರದಿ ನೀಡುವಂತೆ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಗೆ ವೈದ್ಯಕೀಯ ಶಿಕ್ಷಣ ಇಲಾಖೆ ಸೂಚಿಸಿದೆ. 

ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇಂದ್ರದಲ್ಲಿ ಕಾಯಕಲ್ಪ ಪರಿವೀಕ್ಷಣೆ ಸಂದರ್ಭದಲ್ಲಿ ಡಾ.ಮಧುಸೂದನ್‌ ಹಾಗೂ ವೈದ್ಯರ ನಡುವೆ ಬುಧವಾರ ಮಾತಿನ ಚಕಮಕಿ ನಡೆದಿತ್ತು.

ಮಧುಸೂದನ್ ಕಂಪ್ಯೂಟರ್‌ ಕೀ ಬೋರ್ಡ್‌ ಒಡೆದು ಹಾಕಿದ್ದಾರೆ ಎಂದು ಸಿಬ್ಬಂದಿ ದೂರಿದ್ದರು. ಘಟನೆಗೆ ಸಂಬಂಧಿಸಿದಂತೆ 15 ಮಹಿಳಾ ವೈದ್ಯರು ಹಾಗೂ ಮಧುಸೂದನ್ ‍ಪರಸ್ಪರ ದೂರು ದಾಖಲಿಸಿದ್ದರು. 

‘ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಹಿರಿಯ ವೈದ್ಯರೊಂದಿಗೆ ಚರ್ಚಿಸಲಾಗುವುದು. ಈ ಬಗ್ಗೆ ವರದಿಯನ್ನೂ ಕೇಳಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್ ತಿಳಿಸಿದರು. 

ಟ್ರಾಮಾ ಕೇಂದ್ರದ ವಿಶೇಷ ಅಧಿಕಾರಿ ಡಾ. ಬಾಲಾಜಿ ಪೈ ಹಾಗೂ ಹಿರಿಯ ವೈದ್ಯರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ಮತ್ತು ಜಾವೇದ್ ಅಖ್ತರ್ ಅವರನ್ನು ಭೇಟಿ ಮಾಡಿ, ಘಟನೆಯ ಮಾಹಿತಿ ನೀಡಿದ್ದಾರೆ. 

ಪ್ರತಿಕ್ರಿಯಿಸಿ (+)