ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ದೌರ್ಜನ್ಯ: ಬಂಧನ

Published 26 ಏಪ್ರಿಲ್ 2024, 0:29 IST
Last Updated 26 ಏಪ್ರಿಲ್ 2024, 0:29 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಮಂಜುಮ್ (30) ಎಂಬಾತನನ್ನು ಕೆ.ಆರ್. ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಕೋಲ್ಕತ್ತದ ಮಂಜುಮ್, ಕೆಲ ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದ. ಕೂಲಿ ಕಾರ್ಮಿಕನಾಗಿ ಕೆಲಸಕ್ಕೆ ಸೇರಿದ್ದ. ಬಾಲಕಿಯ ಪೋಷಕರು ನೀಡಿದ್ದ ದೂರು ಆಧರಿಸಿ ಈತನನ್ನು ಸೆರೆ ಹಿಡಿಯಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಆರೋಪಿ ಹಾಗೂ ಬಾಲಕಿ, ಒಂದೇ ಪ್ರದೇಶದಲ್ಲಿ ವಾಸವಿದ್ದರು. ಏಪ್ರಿಲ್ 18ರಂದು ಬಾಲಕಿಯ ಪೋಷಕರು ಹೊರಗಡೆ ಹೋಗಿದ್ದರು. ಇದೇ ಸಂದರ್ಭದಲ್ಲಿ ಮನೆಗೆ ನುಗ್ಗಿದ್ದ ಆರೋಪಿ, ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದ. ‍ಪೋಷಕರು ಮನೆಗೆ ಬಂದಾಗ, ಬಾಲಕಿ ಅಸ್ವಸ್ಥಗೊಂಡು ಬಿದ್ದಿದ್ದಳು. ಅವಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.’

‘ತಪಾಸಣೆ ನಡೆಸಿದ್ದ ವೈದ್ಯರು, ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಹೇಳಿದ್ದರು. ಬಳಿಕವೇ ಪೋಷಕರು ಠಾಣೆಗೆ ದೂರು ನೀಡಿದ್ದರು. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಬಾಲಕಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT