ಗುರುವಾರ , ಜೂನ್ 24, 2021
28 °C

ಜೂಜು ಅಡ್ಡೆ ನಡೆಸುತ್ತಿದ್ದ ಆರೋಪ; ಹರಿರಾಜ್ ಶೆಟ್ಟಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಿಕ್ರಿಯೇಷನ್‌ ಕ್ಲಬ್‌ ನಡೆಸುತ್ತಿದ್ದ ಹರಿರಾಜ್ ಶೆಟ್ಟಿ ಅವರನ್ನು ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ನಗರದಲ್ಲಿ ರಿಕ್ರಿಯೇಷನ್‌ ಕ್ಲಬ್‌ ಹೆಸರಿನಲ್ಲಿ ಹರಿರಾಜ್, ಜೂಜು ಅಡ್ಡೆ ನಡೆಸುತ್ತಿದ್ದರು. ಕ್ಲಬ್‌ ಮೇಲೆ ಈ ಹಿಂದೆ ಹಲವು ಬಾರಿ ದಾಳಿ ಮಾಡಿದ್ದ ಸಿಸಿಬಿ ಪೊಲೀಸರು, ಹರಿರಾಜ್ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿದ್ದರು. ಬಹುತೇಕ ಪ್ರಕರಣಗಳಲ್ಲಿ ಹರಿರಾಜ್ ಜಾಮೀನು ಪಡೆದಿದ್ದರು’ ಎಂದು ಸಿಸಿಬಿ ಮೂಲಗಳು ಹೇಳಿವೆ.

‘ಕೋರಮಂಗಲ, ಕಬ್ಬನ್ ಪಾರ್ಕ್, ಅಶೋಕನಗರ, ಬಸವೇಶ್ವರನಗರ ಹಾಗೂ ಇತರೆ ಠಾಣೆಗಳಲ್ಲಿ ಹರಿರಾಜ್ ವಿರುದ್ಧ 15ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಹೀಗಾಗಿ, ಅವರನ್ನು ಗೂಂಡಾ ಕಾಯ್ದೆಯಡಿ ಈ ಹಿಂದೆಯೇ ಬಂಧಿಸಲಾಗಿತ್ತು. ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದ ಹರಿರಾಜ್, ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ತಡೆಯಾಜ್ಞೆ ತಂದು ಜೈಲಿನಿಂದ ಹೊರಬಂದಿದ್ದರು.’

‘ಗೂಂಡಾ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ನೀಡಿದ್ದ ತಡೆಯಾಜ್ಞೆ ತೆರವು ಮಾಡುವಂತೆ ಸಿಸಿಬಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ, ತಡೆಯಾಜ್ಞೆಯನ್ನು ರದ್ದುಪಡಿಸಿದೆ. ಹೀಗಾಗಿ, ಹರಿರಾಜ್‌ ಅವರನ್ನು ಸಿಸಿಬಿ ಪೊಲೀಸರು ಎರಡನೇ ಬಾರಿ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ’ ಎಂದೂ ಮೂಲಗಳು ತಿಳಿಸಿವೆ.

ಹರಿರಾಜ್‌ ಶೆಟ್ಟಿ ಅವರು ‘ಮುಂಗಾರು ಮಳೆ–2’ ಸಿನಿಮಾ ನಾಯಕಿ ನೇಹಾ ಶೆಟ್ಟಿ ಅವರ ತಂದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು