ಶನಿವಾರ, ಮಾರ್ಚ್ 25, 2023
30 °C
ಅಗಲಿದ ಯುವ ನಟನಿಗೆ ಕನ್ನಡ ರಾಜ್ಯೋತ್ಸವದಲ್ಲಿ ನುಡಿ ನಮನ

ಪುನೀತ್‌ ಕಂಚಿನ ಪ್ರತಿಮೆ ಸ್ಥಾಪನೆಗೆ ಬಿಬಿಎಂಪಿ ನೌಕರರ ಸಂಘ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬಿಬಿಎಂಪಿ ನೌಕರರ ಕನ್ನಡ ಸಂಘವು ಪಾಲಿಕೆಯ ಕೇಂದ್ರ ಕಛೇರಿ ಆವರಣದಲ್ಲಿ ರಾಜಕುಮಾರ್‌ ಅವರ ಪ್ರತಿಮೆಯ ಪಕ್ಕದಲ್ಲಿ ಪುನೀತ್ ರಾಜಕುಮಾರ್‌ ಅವರ ಕಂಚಿನ ಪ್ರತಿಮೆ ಸ್ಥಾಪಿಸುವಂತೆ ಮನವಿ ಮಾಡಿದೆ.

ಸಂಘವು ಸೋಮವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪುನೀತ್ ರಾಜಕುಮಾರ್ ಅವರಿಗೂ ನುಡಿ ನಮನ ಸಲ್ಲಿಸಲಾಯಿತು.

ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಹಾಗೂ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಕನ್ನಡ ಧ್ವಜಾರೋಹಣ  ನೆರವೇರಿಸಿದರು. ರಾಜಕುಮಾರ್ ಪ್ರತಿಮೆಗೆ ಮತ್ತು ಪುನೀತ್ ರಾಜಕುಮಾರ್ ಅವರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಗೌರವ್ ಗುಪ್ತ ಮಾತನಾಡಿ, ‘ಯುವಕರ ಆಶಾಕಿರಣವಾಗಿದ್ದ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ಅಗಲುವಿಕೆ ದುಃಖಕರ ಸಂಗತಿ. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಚಲನಚಿತ್ರಗಳನ್ನು ಅವರು ನೀಡಿದ್ದರು. ಬಿಬಿಎಂಪಿ ಕೇಂದ್ರ ಕಚೇರಿ ಅವರಣದಲ್ಲಿರುವ ರಾಜಕುಮಾರ್ ಅವರ ಪ್ರತಿಮೆ ಪಕ್ಕದಲ್ಲಿ ಪುನೀತ್ ಅವರ ಕಂಚಿನ ಪ್ರತಿಮೆ ಸ್ಥಾಪಿಸುವ ಪ್ರಸ್ತಾವನೆಯನ್ನು ಪರಿಶೀಲಿಸಲಾಗುವುದು’ ಎಂದರು.

ಬಿಬಿಎಂಪಿ ನೌಕರರ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್, ‘ಬಿಬಿಎಂಪಿ ಅನುಮತಿ ನೀಡಿದ್ದೇ ಆದರೆ, ಎರಡು ತಿಂಗಳಲ್ಲಿ ರಾಜಕುಮಾರ್ ಕುಟುಂಬಸ್ಥರಿಂದಲೇ ಪುನೀತ್‌ ಅವರ ಪ್ರತಿಮೆ ಅನಾವರಣ ಮಾಡಲಾಗುವುದು’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು