ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡ್ರಗ್ಸ್‌ ಜಾಲದಲ್ಲಿ ಹವಾಲಾ: ತನಿಖೆಗೆ ಇ.ಡಿ ತಯಾರಿ

Last Updated 11 ಸೆಪ್ಟೆಂಬರ್ 2020, 1:32 IST
ಅಕ್ಷರ ಗಾತ್ರ

ಬೆಂಗಳೂರು: ಡ್ರಗ್ಸ್ ಜಾಲದ ತನಿಖೆಯನ್ನುಜಾರಿ ನಿರ್ದೇಶನಾಲಯ (ಇ.ಡಿ) ಆರಂಭಿಸಿದ್ದು, ಇ.ಡಿ ಅಧಿಕಾರಿಗಳು ಸಿಸಿಬಿ ಕಚೇರಿಗೆ ಗುರುವಾರ ಭೇಟಿ ನೀಡಿ ಆರೋಪಿವಿರೇನ್ ಖನ್ನಾ ವಹಿವಾಟಿನ ಕುರಿತು ಮಾಹಿತಿ ಕಲೆ ಹಾಕಿದ್ದಾರೆ ಎನ್ನಲಾಗಿದೆ.

ಖನ್ನಾ ವಿದೇಶದಿಂದ ಡ್ರಗ್ಸ್ ತರಿಸಿಕೊಳ್ಳುತ್ತಿದ್ದು, ಅಲ್ಲಿನ ಡ್ರಗ್ಸ್ ದಂಧೆಕೋರರ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪ ಇದೆ. ಈ ಸಂದರ್ಭದಲ್ಲಿ ವಿದೇಶಿಗರೊಂದಿಗೆ ಹಣದ ವಹಿವಾಟು ನಡೆಸಿದ್ದಾರೆ ಮತ್ತು ಹವಾಲಾ ವ್ಯವಹಾರ ನಡೆದಿದೆ ಎಂದು ಶಂಕಿಸಲಾಗಿದೆ.

‘ಇ.ಡಿ ಅಧಿಕಾರಿಗಳು ಗುರುವಾರ ಬೆಳಿಗ್ಗೆ 10.30ರ ಸುಮಾರಿನಲ್ಲಿ ಸಿಸಿಬಿ ಕಚೇರಿಗೆ ಬಂದಿದ್ದು, ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿ ಮಧ್ಯಾಹ್ನದ ತನಕ ಚರ್ಚೆ ನಡೆಸಿದ್ದಾರೆ. ಖನ್ನಾ, ರಾಗಿಣಿ ಮತ್ತು ಸಂಜನಾ ಮನೆಯಲ್ಲಿ ವಶಪಡಿಸಿಕೊಂಡ ದಾಖಲೆಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಪ್ರಕರಣ ದಾಖಲಿಸಲು ಬೇಕಿರುವಷ್ಟು ದಾಖಲೆಗಳನ್ನು ಅವರು ಪಡೆದುಕೊಂಡಿದ್ದಾರೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT