ಬುಧವಾರ, ನವೆಂಬರ್ 25, 2020
25 °C

ಬೆಂಗಳೂರು: ಹವಾಲಾ ದಂಧೆ; ₹ 28 ಲಕ್ಷ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹವಾಲಾ ದಂಧೆಯಲ್ಲಿ  ತೊಡಗಿದ್ದ ಆರೋಪದಡಿ ಪಂಕಜ್ ಪಟೇಲ್ (47) ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಆತನಿಂದ ₹ 28 ಲಕ್ಷ ಜಪ್ತಿ ಮಾಡಿದ್ದಾರೆ.

'ಕಬ್ಬನ್ ಪೇಟೆ ಮುಖ್ಯ ರಸ್ತೆಯಲ್ಲಿರುವ ಮನೆಯಲ್ಲಿ ಆರೋಪಿ ಹಣ ಸಂಗ್ರಹ ಮಾಡಿದ್ದ. ಈ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಮನೆ ಮೇಲೆ ದಾಳಿ ಮಾಡಲಾಯಿತು' ಎಂದು ಪೊಲೀಸರು ತಿಳಿಸಿದರು.

'ಅಕ್ರಮವಾಗಿ ಹಣ ಸಂಗ್ರಹಿಸಿದ್ದ ಆರೋಪಿ, ಆ ಹಣಕ್ಕೆ ಸರ್ಕಾರಕ್ಕೆ ತೆರಿಗೆ ಪಾವತಿ ಮಾಡಿರಲಿಲ್ಲ. ಹಲವರಿಂದ ಹಣ ಪಡೆದಿದ್ದ ಆರೋಪಿ, ಅದನ್ನು ಹವಾಲಾ ದಂಧೆ ಮೂಲಕ ಬದಲಾಯಿಸುತ್ತಿದ್ದ' ಎಂದೂ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು