ಮೊಹಮ್ಮದ್‌ ಷರೀಫ್‌ಗೆ ಜಾಮೀನು

7

ಮೊಹಮ್ಮದ್‌ ಷರೀಫ್‌ಗೆ ಜಾಮೀನು

Published:
Updated:

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್‌) ಕಾರ್ಯಕರ್ತ ಶರತ್‌ ಮಡಿವಾಳ ಹತ್ಯೆ ಪ್ರಕರಣದ ಮೊದಲನೆ ಆರೋಪಿ ಮೊಹಮ್ಮದ್‌ ಷರೀಫ್‌ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

ಈ ಕುರಿತು ಮೊಹಮ್ಮದ್‌ ಷರೀಫ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಜಾನ್‌ ಮೈಕೆಲ್‌ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಹತ್ಯೆ ನಡೆದ ಹತ್ತು ದಿನಗಳ ಬಳಿಕ ಸಾಕ್ಷಿಗಳ ಹೇಳಿಕೆ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಸಮರ್ಪಕ ಸಾಕ್ಷ್ಯ ಸಂಗ್ರಹಿಸಲು ತನಿಖಾಧಿಕಾರಿಗಳು ವಿಫಲರಾಗಿದ್ದಾರೆ’ ಎಂಬ ಕಾರಣಕ್ಕೆ ಜಾಮೀನು ನೀಡಿರುವ ನ್ಯಾಯಪೀಠ, ಅರ್ಜಿದಾರರು ₹ 2 ಲಕ್ಷ ಮೌಲ್ಯದ ಬಾಂಡ್‌, ಇಬ್ಬರ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿದೆ.

ಅರ್ಜಿದಾರರ ಪರ ವಕೀಲ ಬಿ. ಲತೀಫ್‌ ವಾದ ಮಂಡಿಸಿದರು.‌

2017ರ ಜುಲೈ 4ರಂದು ರಾತ್ರಿ ಬಂಟ್ವಾಳ ತಾಲ್ಲೂಕಿನ ಬಿ.ಸಿ. ರೋಡ್‌ ಬಳಿ ಶರತ್‌ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದರು. ನಂತರ ಶರತ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 3

  Frustrated
 • 3

  Angry

Comments:

0 comments

Write the first review for this !