ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮುಖ್ಯಮಂತ್ರಿ ಸ್ಥಾನ ಕಡ್ಲೇಪುರಿನಾ?- ಮಹದೇವಪ್ಪ

Published 2 ಜುಲೈ 2024, 16:45 IST
Last Updated 2 ಜುಲೈ 2024, 16:45 IST
ಅಕ್ಷರ ಗಾತ್ರ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನವನ್ನು ಅವರಿಗೆ ಕೊಡಿ, ಇವರಿಗೆ ಕೊಡಿ ಎನ್ನಲು ಅದೇನು ಕಡ್ಲೇಪುರಿನಾ’ ಎಂದು ಸಮಾಜ ಕಲ್ಯಾಣ ಸಚಿವ ಎಚ್‌.ಸಿ. ಮಹದೇವಪ್ಪ ಪ್ರಶ್ನಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಪ್ರಜಾಪ್ರಭುತ್ವದಲ್ಲಿ ಬಹುಮತವೇ ಮುಖ್ಯ, ಸಿದ್ದರಾಮಯ್ಯ ಅವರು ಹೆಚ್ಚು‌ ಶಾಸಕರ ಬೆಂಬಲ ಪಡೆದು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಶಾಸಕರ ಅಭಿಪ್ರಾಯಕ್ಕೆ ಮನ್ನಣೆ ನೀಡಿ ಅವರನ್ನು ಮುಖ್ಯಮಂತ್ರಿಯಾಗಿ ಹೈಕಮಾಂಡ್‌ ಘೋಷಿಸಿದೆ’ ಎಂದರು.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಆಯ್ಕೆ ನನ್ನ ಕೈಯಲ್ಲೂ ಇಲ್ಲ. ಧರ್ಮಗುರುಗಳ ಕೈಯಲ್ಲೂ ಇಲ್ಲ. ಸಿದ್ದರಾಮಯ್ಯ ಅವರನ್ನು ನೇರವಾಗಿ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಆಯ್ಕೆ ಮಾಡಿಲ್ಲ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT