ಪ್ರಜಾವಾಣಿ ವಾರ್ತೆ

ಬೆಂಗಳೂರು: ‘ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಹೋರಾಟಗಾರರ ಮೇಲೆ ಸುಳ್ಳು ಕೇಸು ದಾಖಲಿಸುವ ಮೂಲಕ ಒಳಮೀಸಲಾತಿ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ’ ಎಂದು ಪ್ರದೇಶ ಮಾದಿಗರ ಸಂಘದ ಅಧ್ಯಕ್ಷ ಪ್ರಭುರಾಜ್ ಕೊಡ್ಲಿ ಆರೋಪ ಮಾಡಿದರು.

‘ಅ.12 ಮತ್ತು 14ರಂದು ಟಿ.ನರಸೀಪುರದಲ್ಲಿ ನಡೆದ ಪ್ರತಿಭಟನೆಯಲ್ಲಿ ಹೋರಾಟಗಾರರು ಮಹದೇವಪ್ಪರಿಗೆ ಪ್ರಾಣ ಬೆದರಿಕೆ ಹಾಕಿದ್ದಾರೆ. ಸುಪ್ರೀಂ ಕೋರ್ಟ್ ವಿರುದ್ಧ ಹೇಳಿಕೆ ನೀಡಿದ್ದಾರೆ. ನ್ಯಾ.ಎಚ್.ಎನ್.ನಾಗಮೋಹನದಾಸ್ ವರದಿಯನ್ನು ಜಾರಿ ಮಾಡಬಾರದು ಎನ್ನುವ ಹೇಳಿಕೆ ನೀಡಿದ್ದಾರೆ ಮುಂತಾದ ಗುರುತರ ಆರೋಪಗಳನ್ನು ಹೊರಿಸಿ ಎಫ್ಐಆರ್ ಮಾಡಲಾಗಿದೆ. ಇದನ್ನು ಖಂಡಿಸುತ್ತೇವೆ. ಸಂಪೂರ್ಣ ಒಳಮೀಸಲಾತಿ ಜಾರಿ ಮಾಡುವರೆಗೂ ಹೋರಾಟ ಮುಂದುವರಿಸುತ್ತೇವೆ’ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಮಲ್ಲಿ ಎಸ್., ಚಿಕ್ಕಮಗಳೂರು ಯುವ ಘಟಕದ ರಾಜ್ಯಾಧ್ಯಕ್ಷ ತಿಪ್ಪೇನ್, ಕಾರ್ಯದರ್ಶಿ ಪುಟ್ಟಣ್ಣ, ಮಾರುತಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.