ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವ ಕ್ಯಾನ್ಸರ್ ದಿನ: ಕೂದಲು ದಾನ ಅಭಿಯಾನ

Last Updated 3 ಫೆಬ್ರುವರಿ 2023, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ಕ್ಯಾನ್ಸರ್ ದಿನದ ಪ್ರಯುಕ್ತ ನಗರದ ಎಚ್‌ಸಿಜಿ ಆಸ್ಪತ್ರೆಯಲ್ಲಿ ಕೂದಲು ದಾನ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಕ್ಯಾನ್ಸರ್ ಚಿಕಿತ್ಸೆ ಸುಧಾರಣೆ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಆಸ್ಪತ್ರೆಯು ಹೊಸದಾಗಿ 23 ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ‘#ಬಾಲ್ಡ್‌ಆ್ಯಂಡ್‌ಬೋಲ್ಡ್’ ಅಭಿಯಾನದಡಿ ಮಹಿಳೆಯರು ತಮ್ಮ ಕೂದಲನ್ನು ದಾನವಾಗಿ ನೀಡಿದರು. ಆರಂಭಿಕ ಹಂತದಲ್ಲಿಯೇ ಕ್ಯಾನ್ಸರ್ ತಪಾಸಣೆಗೆ ಸಂಬಂಧಿಸಿದಂತೆ ವಿಶೇಷ ಪ್ಯಾಕೇಜ್‌ಗಳನ್ನೂ ಅನಾವರಣ ಮಾಡಲಾಯಿತು. ಕ್ಯಾನ್ಸರ್ ತಡೆಗೆ ಜೀವನ ವಿಧಾನದಲ್ಲಿನ ಬದಲಾವಣೆಗಳ ಬಗ್ಗೆಯೂ ಜಾಗೃತಿ ಮೂಡಿಸಲಾಯಿತು.

ಆಸ್ಪತ್ರೆಯ ಮುಖ್ಯ ಕಾರ್ಯಾಚರಣೆ ಅಧಿಕಾರಿ ಎಂ.ಎಸ್. ಮನೀಶಾ ಕುಮಾರ್, ‘ದೇಶವು ಕ್ಯಾನ್ಸರ್ ಆರೈಕೆಯಲ್ಲಿ ಗಮನಾರ್ಹ ಪ್ರಗತಿ ಸಾಧಿಸುತ್ತಿದೆ. ಕ್ಯಾನ್ಸರ್ ಕಾಯಿಲೆ ಎದುರಿಸಲು ಮಾನಸಿಕ ಶಕ್ತಿಯೂ ಅಗತ್ಯ. ಬೇಗ ಆಸ್ಪತ್ರೆಗಳಿಗೆ ತೆರಳಿ, ತಪಾಸಣೆ ಮಾಡಿಸಿಕೊಂಡಲ್ಲಿ ಜೀವಕ್ಕೆ ಅಪಾಯವಾಗುವುದನ್ನು ತಪ್ಪಿಸಬಹುದು. ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದ ಕಾಯಿಲೆಯನ್ನು ವಾಸಿ ಮಾಡಲು ಸಾಧ್ಯ’ ಎಂದು ಹೇಳಿದರು.

‘ಬದಲಾದ ಜೀವನ ಶೈಲಿ, ಪಾಶ್ಚಿಮಾತ್ಯ ಆಹಾರ ಪದ್ಧತಿ, ಧೂಮಪಾನದಂತಹ ವ್ಯಸನಗಳಿಂದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಳವಾಗುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT