ಬೆಂಗಳೂರು: ‘ಮೈತ್ರಿ ಸರ್ಕಾರ ತೆಗೆಯಲು ಅಳಲೇಕಾಯಿ ಪಂಡಿತನಂತೆ ಔಷಧ ಅರೆದ ವ್ಯಕ್ತಿಗೆ ನಮ್ಮ ಪಕ್ಷದ ಮೂವರು ಶಾಸಕರು ಕದ್ದು ಓಡಿ ಹೋದರೋ? ನಾವೇ ಕತ್ತು ಹಿಡಿದು ನೂಕಿದವೋ? ಎಂದು ಗೊತ್ತಿಲ್ಲದೇ ಜಾಣ ಪೆದ್ದನಾಗಿದ್ದು ವಿಪರ್ಯಾಸ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

‘ಕುಮಾರಸ್ವಾಮಿ ಪೆದ್ದ’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ‘ಕಾಂಗ್ರೆಸ್‌ನ ಹತ್ತಾರು ಮಂದಿಯ ಪೈಕಿ ‘ಎದೆ ಸೀಳಿದರೆ ಸಿದ್ದು ಕಾಣುತ್ತಾರೆ' ಎಂಬ ಅನುಯಾಯಿಗಳು ಬಿಜೆಪಿಗೆ ಹಾರಲು ಮಸಲತ್ತು ನಡೆಸಿದವರು ಯಾರೆಂಬುದು 'ಸಿದ್ಧವನ'ದಲ್ಲಿ ಕುಳಿತಿದ್ದ 'ರಾಮ'ನಿಗೂ ಗೊತ್ತಿತ್ತು’ ಎಂದು ಕುಟುಕಿದ್ದಾರೆ. ‘ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ರಾಜ್ಯದ ಜನರು ಅರ್ಧಚಂದ್ರ ಪ್ರಯೋಗ ಮಾಡಿದರು. ಈಗ ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ಕೇವಲ ಭ್ರಮೆ. ಜನ ಕಲ್ಯಾಣಕ್ಕೆ ದೂರದೃಷ್ಟಿಯ ಕಾರ್ಯಸಾಧ್ಯವಾದ ಯೋಜನೆಗಳನ್ನು ರೂಪಿಸುವಲ್ಲಿ ಎಡವಿದ್ದ ಸಿದ್ದರಾಮಯ್ಯ ಅಗ್ಗದ ಯೋಜನೆಗಳ ಮೂಲಕ ಜನರ ತುಟಿಗೆ ತುಪ್ಪ ಸವರುವ ಆಡಳಿತಕ್ಕೆ ಕಳೆದ ಬಾರಿ ತಕ್ಕ ಶಾಸ್ತಿ ಮಾಡಿದ್ದರು. ಇವರ ದುರಾಡಳಿತವನ್ನು ಜನರು ಇನ್ನೂ ಮರೆ
ತಿಲ್ಲ. ಉಪಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಪಾಠ ಕಲಿಸಲಿದ್ದಾರೆ’ ಎಂದು ಹೇಳಿದ್ದಾರೆ.

‘ಯಾರನ್ನು ಯಾರು ಎಲ್ಲಿಗೆ ಕಳುಹಿಸಿದರು? ಸ್ವಾರ್ಥ ರಾಜಕಾರಣಕ್ಕಾಗಿ ಮೂಲ ಕಾಂಗ್ರೆಸ್ಸಿಗರ ಮೇಲೆ ಯಾರು ಸವಾರಿ ಮಾಡುತ್ತಿದ್ದಾರೆ? ಎಂಬುದನ್ನು ತಿಳಿಯದಷ್ಟು ಜನ ಪೆದ್ದರಲ್ಲ. ನಮ್ಮ ಮೂವರು ಶಾಸಕರು ಪಕ್ಷದಿಂದ ಹೊರಹೋಗಲು ನಡೆದ ಸಂಚಿನಲ್ಲಿ ಹಣ ಅಧಿಕಾರದ ಆಮಿಷ ಮಾತ್ರವಲ್ಲ. ಕೆಲವರ 'ಕೈ'ವಾಡ ಕೂಡ ಕಾರಣ’ ಎಂದು ಕುಮಾರಸ್ವಾಮಿ ದೂರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.