ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಚ್.ಡಿ. ಕುಮಾರಸ್ವಾಮಿ ಪೆನ್ ಡ್ರೈವ್ ಪಿತಾಮಹ: ಸಚಿವ ಕೆ.ಎನ್. ರಾಜಣ್ಣ

Published 25 ಮೇ 2024, 10:43 IST
Last Updated 25 ಮೇ 2024, 10:43 IST
ಅಕ್ಷರ ಗಾತ್ರ

ಬೆಂಗಳೂರು: 'ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರೇ ಪೆನ್ ಡ್ರೈವ್ ಪಿತಾಮಹ. ಮೊದಲು ಜೇಬಿನಿಂದ ಪೆನ್ ಡ್ರೈವ್ ತೆಗೆದು ತೋರಿಸಿದ್ದವರೇ ಅವರು' ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಹೇಳಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, 'ಪೆನ್ ಡ್ರೈವ್ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ಕುಮಾರಸ್ವಾಮಿ ಅವರಿಂದಲೇ ಕಲಿಯಬೇಕು' ಎಂದರು.

ಈಗ ಕುಮಾರಸ್ವಾಮಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರಿಗೆ ಬುದ್ಧಿಭ್ರಮಣೆ ಆಗಿದೆ ಎಂದು ವಾಗ್ದಾಳಿ ನಡೆಸಿದರು.

ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ವಿಡಿಯೊಗಳಿದ್ದ ಪೆನ್ ಡ್ರೈವ್ ಹಂಚಿದ್ದು ದೊಡ್ಡ ಅಪರಾಧ ಎಂದು ಹೇಳುತ್ತಿದ್ದಾರೆ. ಹಾಗಿದ್ದರೆ ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ ವಿಡಿಯೊ ಹಂಚಿದವರ ವಿರುದ್ಧ ಏಕೆ ಕ್ರಮ ಆಗಲಿಲ್ಲ? ಆ ವಿಡಿಯೊದಲ್ಲಿ ದಲಿತ ಹೆಣ್ಣು ಮಗಳಿದ್ದಳು ಅಲ್ಲವೆ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಗ ರಾಕೇಶ್ ಸಾವಿನ ವಿಚಾರವನ್ನು ಈಗ ಪ್ರಸ್ತಾಪಿಸುವುದು ಬೇಡ. ಅಲ್ಲಿ ಏನು ನಡೆದಿತ್ತು ಎಂಬುದು ಯಾರಿಗೆ ಗೊತ್ತು? ಆ ವಿಚಾರ ಮಾತನಾಡಿ ಯಾರನ್ನೂ ನೋಯಿಸುವುದು ಬೇಡ. ನಮಗೂ ಮಾತನಾಡಲು ಸಾವಿರ ವಿಚಾರಗಳಿವೆ ಎಂದರು.

'ದೇವೇಗೌಡರೇ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಕಳುಹಿಸಿದ್ದಾರೆ' ಎಂಬ ಸಿದ್ದರಾಮಯ್ಯ ಹೇಳಿಕೆ ಕುರಿತು ಕೇಳಿದಾಗ, 'ಮುಖ್ಯಮಂತ್ರಿಯವರಿಗೆ ಎಲ್ಲ ಮಾಹಿತಿಯೂ ಇರುತ್ತದೆ. ಸುಳ್ಳು ಎಂದು ನಿರಾಕರಿಸಲು ಸಾಧ್ಯವಿಲ್ಲ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT