ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ಅಧಿಕಾರ ದುರ್ಬಳಕೆ, ಹಣಬಲ ಮತ್ತು ತೋಳ್ಬಲದಿಂದ ಚುನಾವಣೆ ಗೆಲ್ಲಲು ಹೊರಟಿದ್ದಾರೆ. ತಕ್ಷಣವೇ ಈ ಕ್ಷೇತ್ರಕ್ಕೆ ಅರೆ ಸೇನಾಪಡೆ ನಿಯೋಜಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರ ಚುನಾವಣಾ ಆಯೋಗವನ್ನು ಒತ್ತಾಯಿಸಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರನ್ನು ಮಂಗಳವಾರ ಭೇಟಿ ಮಾಡಿ ಚರ್ಚಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಭಾರಿ ಪ್ರಮಾಣದ ಚುನಾವಣಾ ಅಕ್ರಮಗಳು ನಡೆಯುತ್ತಿವೆ. ಬಿಜೆಪಿಯ ಅಭ್ಯರ್ಥಿಯಾಗಿ ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಆಯ್ಕೆಯಾದ ಬಳಿಕ ಕಂಗೆಟ್ಟಿರುವ ಶಿವಕುಮಾರ್ ಸಹೋದರರು ಅಕ್ರಮಗಳ ಮೂಲಕ ಚುನಾವಣೆ ಗೆಲ್ಲಲು ಹೊರಟಿದ್ದಾರೆ' ಎಂದು ಆರೋಪಿಸಿದರು.

ಕ್ಷೇತ್ರದಲ್ಲಿ ಮತದಾರರಿಗೆ ಕುಕ್ಕರ್ ವಿತರಿಸುವ ಕೆಲಸ ಭರದಿಂದ ನಡೆಯುತ್ತಿದೆ. ಹಾರೋಹಳ್ಳಿಯ ಸ್ಟೌ ಕ್ರಾಫ್ಟ್ ಲಿಮಿಟೆಡ್ ಎಂಬ ಕಂಪನಿಯಲ್ಲಿ ನಿರಂತರವಾಗಿ ಕುಕ್ಕರ್ ತಯಾರಿಕೆ ನಡೆದಿದೆ. ಈ ಕುರಿತು ನಾನು ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ್ದೆ. ಪರಿಶೀಲನೆ ನಡೆಸುವಂತೆ ಅವರು ರಾಮನಗರ ಜಿಲ್ಲಾಧಿಕಾರಿಗೆ ಸೂಚಿಸಿದ್ದರು. ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳನ್ನು ಕಳುಹಿಸಿದ್ದರು. ಏನೂ ನಡೆದಿಲ್ಲ ಎಂಬ ವರದಿ ನೀಡಿ, ಮುಚ್ಚಿ ಹಾಕಿದ್ದಾರೆ. ಈಗಲೂ ಕುಕ್ಕರ್ ತಯಾರಿಕೆ ಮತ್ತು ಸಾಗಾಣಿಕೆ ನಡೆದಿದೆ ಎಂದು ಫೋಟೊಗಳನ್ನು ಪ್ರದರ್ಶಿಸಿದರು.

ರಾಮನಗರ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣಾ ಪ್ರಕ್ರಿಯೆ ನಡೆಸುವಲ್ಲಿ ವಿಫಲವಾಗಿದ್ದಾರೆ. ಶಿವಕುಮಾರ್ ಮತ್ತು ಸುರೇಶ್ ಸಹೋದರರ ಚುನಾವಣಾ ಅಕ್ರಮಗಳನ್ನು ನಿಯಂತ್ರಿಸುವ ಶಕ್ತಿ ಅವರಿಗೆ ಇಲ್ಲ. ಕೇಂದ್ರ ಚುನಾವಣಾ ಆಯೋಗವು ತಕ್ಷಣವೇ ಈ ಮೂರೂ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು. ದಕ್ಷ ಅಧಿಕಾರಿಗಳನ್ನು ಅಲ್ಲಿಗೆ ನಿಯೋಜಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳನ್ನು ಚುನಾವಣೆಗೆ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ವಾರ್ಡ್ವಾರು ಕಾಂಗ್ರೆಸ್ಗೆ ಮತ ಹಾಕಿಸುವ ಗುರಿಯನ್ನು ನೀಡಿದ್ದಾರೆ. ಗುತ್ತಿಗೆದಾರರ ಮೂಲಕ ಹಣ ಸಾಗಿಸಿ, ಎಲ್ಲೆಲ್ಲಿ ದಾಸ್ತಾನು ಮಾಡಿದ್ದಾರೆ ಎಂಬ ಮಾಹಿತಿಯೂ ಬರುತ್ತಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗವು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆ ನಡೆಯುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.

ʼನಾನು ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ. ಕೇಂದ್ರ ಚುನಾವಣಾ ಆಯೋಗ ಮತ್ತು ಬಿಜೆಪಿಯ ಕೇಂದ್ರ ವರಿಷ್ಠರ ಗಮನಕ್ಕೆ ಈ ವಿಷಯವನ್ನು ತಲುಪಿಸುವಂತೆ ಬಿಜೆಪಿಯ ಸ್ನೇಹಿತರಿಗೂ ಮನವಿ ಮಾಡುತ್ತೇನೆ ಎಂದರು.

ಕಾರ್ಯಕರ್ತರು ಅಖಾಡಕ್ಕೆ ಇಳಿಯುತ್ತಾರೆ:

ಚುನಾವಣಾ ಆಯೋಗ ಬಿಗಿಯಾದ ಕ್ರಮ ಕೈಗೊಳ್ಳದೇ ಇದ್ದರೆ ಜೆಡಿಎಸ್ವ ಕಾರ್ಯಕರ್ತರೇ ಕಾರ್ಯಾಚರಣೆಗೆ ಇಳಿಯುತ್ತಾರೆ. ಕುಕ್ಕರ್, ಸೀರೆ ದಾಸ್ತಾನು ಪತ್ತೆಮಾಡಿ ಬೆಂಕಿ ಹಚ್ಚುವಂತೆ ನಾನೇ ಕರೆ ನೀಡುತ್ತೇನೆ. ಯಾರ ಮೇಲೆ ಪ್ರಕರಣ ದಾಖಲಿಸುತ್ತಾರೆ ನೋಡುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

'ಮಿಸ್ಟರ್ ಶಿವಕುಮಾರ್, 2002ರ ಉಪ ಚುನಾವಣೆಯಲ್ಲಿ ಏನಾಯಿತು ಎಂಬುದನ್ನು ನೆನಪು ಮಾಡಿಕೊಳ್ಳಿ. ಶಿಡ್ಲಘಟ್ಟ, ದೇವನಹಳ್ಳಿ, ಮೈಸೂರಿನಿಂದ ಕಳ್ಳ ಮತದಾನಕ್ಕೆ ನೀವು ಕರೆತಂದಿದ್ದ ಜನರನ್ನು ಬಟ್ಟೆ ಬಿಚ್ಚಿಸಿ ಚಡ್ಡಿಯಲ್ಲಿ ಕೂರಿಸಿದ್ದೆವು. ಈಗಲೂ ಅಕ್ರಮ ಮುಂದುವರಿದರೆ ಅದೇ ಆಗುತ್ತದೆ. ಶೀಘ್ರದಲ್ಲಿ ನಾನು ಪೂರ್ಣ ಪ್ರಮಾಣದಲ್ಲಿ ಅಖಾಡಕ್ಕೆ ಇಳಿಯುತ್ತೇನೆ' ಎಂದರು.
.JDS ಇಲ್ಲವಾಗಿದೆ; ಕುಮಾರಸ್ವಾಮಿ ಬಿಜೆಪಿ ವಕ್ತಾರ: ಡಿ.ಕೆ. ಶಿವಕುಮಾರ್ ವ್ಯಂಗ್ಯ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.