ಬೆಳಗಾವಿ: ‘ರಾಯಬಾಗ ತಾಲ್ಲೂಕಿನ ನಿಡಗುಂದಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ವೀರಣ್ಣ ಮಡಿವಾಳರ ಅವರನ್ನು ಸೇವೆಯಿಂದ ಅಮಾನತು ಮಾಡಿದ್ದು ಸರಿಯಲ್ಲ. ಅಮಾನತು ಆದೇಶ ಹಿಂಪಡೆಯದಿ
ದ್ದರೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಚಿಕ್ಕೋಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲಾಗುವುದು’ ಎಂದು ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದ್ದಾರೆ.