ಶುಕ್ರವಾರ, 1 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

128 ಮಹಿಳಾ ಕ್ಲಿನಿಕ್‌ಗಳು ಕಾರ್ಯಾರಂಭ: ಸಚಿವ ಡಾ.ಕೆ. ಸುಧಾಕರ್

ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮಾಹಿತಿ
Last Updated 4 ಜನವರಿ 2023, 16:11 IST
ಅಕ್ಷರ ಗಾತ್ರ

ಬೆಂಗಳೂರು: ‘ಕಳೆದ ವರ್ಷ ಆರೋಗ್ಯ ಕ್ಷೇತ್ರದ ಮೂಲಸೌಕರ್ಯ ವೃದ್ಧಿಯಲ್ಲಿ ಗಮನಾರ್ಹ ಸಾಧನೆಯಾಗಿದೆ. 128 ಮಹಿಳಾ ಕ್ಲಿನಿಕ್‌ಗಳು ಮತ್ತು ನಗರ ಪ್ರದೇಶಗಳಲ್ಲಿ 128 ಪಾಲಿಕ್ಲಿನಿಕ್‌ಗಳು ಕಾರ್ಯಾರಂಭ ಮಾಡುವ ಹಂತದಲ್ಲಿವೆ’ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ.

ವರ್ಷದ ಸಾಧನೆಗಳ ಮಾಹಿತಿಯನ್ನು ಅವರು ಹಂಚಿಕೊಂಡಿದ್ದು, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತಂದು, ಎಲ್ಲರಿಗೂ ಆರೋಗ್ಯದ ಹಕ್ಕು ನೀಡಲಾಗಿದೆ. ಕರ್ನಾಟಕವು ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು, ಆರೋಗ್ಯ ವಲಯದಲ್ಲಿ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ. ನಾಗರಿಕ ಸಹಾಯವಾಣಿಯನ್ನು ತಾಲ್ಲೂಕು ಮಟ್ಟದ ಆಸ್ಪತ್ರೆಗಳಿಗೂ ವಿಸ್ತರಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.

‘ನಿಮ್ಹಾನ್ಸ್ ಸಂಸ್ಥೆಯ ಸಹಯೋಗದಲ್ಲಿ ಕರ್ನಾಟಕ ಮಿದುಳು ಆರೋಗ್ಯ ಕಾರ್ಯಕ್ರಮದಡಿ ನರ ಸಂಬಂಧಿ ಕಾಯಿಲೆಗಳ ಆರೈಕೆಗೆ ಆದ್ಯತೆ ನೀಡಲಾಗಿದೆ. ಟೆಲಿ ಮೆಡಿಸನ್ ವ್ಯವಸ್ಥೆಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಾರಿಗೊಳಿಸಲಾಗಿದೆ. 3,200 ಸಾಮಾನ್ಯ ವೈದ್ಯರು, 600 ತಜ್ಞ ವೈದ್ಯರು ಮತ್ತು 100 ಸೂಪರ್ ಸ್ಪೆಷಾಲಿಟಿ ವೈದ್ಯರು ಪಾಳಿಗಳಲ್ಲಿ ವೈದ್ಯಕೀಯ ಸಲಹೆ ನೀಡುತ್ತಿದ್ದಾರೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT