ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾನ ನಿಲ್ದಾಣಕ್ಕೆ ‘ಆರೋಗ್ಯ ಮಾನ್ಯತೆ’

Last Updated 18 ಜನವರಿ 2021, 19:12 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಸಂದರ್ಭದಲ್ಲಿ ಪ್ರಯಾಣಿಕರ ಸುರಕ್ಷತೆಗೆ ಕೈಗೊಂಡಿದ್ದ ಕ್ರಮಗಳು ಹಾಗೂ ಒದಗಿಸಿದ್ದ ಸೌಲಭ್ಯಗಳನ್ನು ಪರಿಗಣಿಸಿಬೆಂಗಳೂರು ವಿಮಾನ ನಿಲ್ದಾಣ ಸಂಸ್ಥೆಗೆ (ಬಿಐಎಎಲ್‌) ಏರ್‌ಪೋರ್ಟ್‌ ಕೌನ್ಸಿಲ್‌ ಇಂಟರ್‌ನ್ಯಾಷನಲ್‌ (ಎಸಿಐ) ‘ಆರೋಗ್ಯ ಮಾನ್ಯತೆ’ ನೀಡಿದೆ.

ಪ್ರಯಾಣಿಕರು, ಉದ್ಯೋಗಿಗಳು ಮತ್ತು ಸಾರ್ವಜನಿಕರ ಸುರಕ್ಷತೆಗೆ ಬಿಐಎಎಲ್‌ ಕೈಗೊಂಡ ಕ್ರಮಗಳಿಗೆ ಎಸಿಐ ಶ್ಲಾಘನೆ ವ್ಯಕ್ತಪಡಿಸಿದೆ.

‘ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣದ ಸಂಪೂರ್ಣ ಸಮುದಾಯದ ಸುರಕ್ಷತೆಯ ಬಗ್ಗೆ ಬಿಐಎಎಲ್‌ ಹೊಂದಿದ್ದ ಬದ್ಧತೆಯನ್ನು ಈ ಮಾನ್ಯತೆಯು ಎತ್ತಿ ಹಿಡಿದಿದೆ. ನಮ್ಮ ಪ್ರಯತ್ನವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿರುವುದು ಹೆಮ್ಮೆಯ ಸಂಗತಿ’ ಎಂದು ಬಿಐಎಎಲ್‌ನ ಮುಖ್ಯ ಕಾರ್ಯಾಚರಣೆ ಅಧಿಕಾರಿ ಜಯರಾಜ್ ಷಣ್ಮುಗಂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT