ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಕನ್ನಡ ರಾಜ್ಯೋತ್ಸವದಂದು ಬೃಹತ್ ಆರೋಗ್ಯ ಶಿಬಿರ

Last Updated 29 ಅಕ್ಟೋಬರ್ 2022, 21:15 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಹಾಗೂ ಪುನೀತ್ ರಾಜ್‌ಕುಮಾರ್ ಅವರ ಪುಣ್ಯಸ್ಮರಣೆ ಪ್ರಯುಕ್ತನಿತ್ಯ ನಿರಂತರ ಸೇವಾ ಟ್ರಸ್ಟ್ ಮಂಗಳವಾರ (ನ.1) ಬೆಳಿಗ್ಗೆ 9ರಿಂದ ಮಧ್ಯಾಹ್ನ 2.30ರವರೆಗೆ ಬೃಹತ್ ಆರೋಗ್ಯ ಶಿಬಿರ ಹಮ್ಮಿಕೊಂಡಿದೆ.

ಬಸವನಗುಡಿಯ ವಿದ್ಯಾಪೀಠದ ಸಮೀಪವಿರುವ (ಶಂಕರ್‌ನಾಗ್ ವೃತ್ತ) ಕೆಂಪೇಗೌಡ ಆಟದ ಮೈದಾನದಲ್ಲಿ ಈ ಆರೋಗ್ಯ ಶಿಬಿರ ನಡೆಯಲಿದೆ. ಸಂಸದ ತೇಜಸ್ವಿಸೂರ್ಯ ಹಾಗೂ ಶಾಸಕ ರವಿಸುಬ್ರಹ್ಮಣ್ಯ ಅವರ ಸಹಕಾರ, ನಾರಾಯಣ ಹೃದಯಾಲಯ ಹಾಗೂ ವಿಠಲ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ತಜ್ಞವೈದ್ಯರ ಸಲಹೆ, ಹೃದಯ ಸಂಬಂಧಿ ಪರೀಕ್ಷೆ, ಕಣ್ಣಿನ ಪರೀಕ್ಷೆ, ಮೂಳೆ ತಜ್ಞರಿಂದ ಪರೀಕ್ಷೆ, ರಕ್ತದೊತ್ತಡ ಪರೀಕ್ಷೆ, ಮಧುಮೇಹ ಪರೀಕ್ಷೆ, ಪಲ್ಮನರಿ ಫಂಕ್ಷನ್ ಪರೀಕ್ಷೆ, ಮೆಮೋಗ್ರಾಮ್ ಪರೀಕ್ಷೆ ಹಾಗೂ ಮೂಳೆ ಸಾಂದ್ರತೆ ಪರೀಕ್ಷೆಯ ಸೌಲಭ್ಯ ಇರಲಿದೆ. ಅವಶ್ಯವಿದ್ದಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ, ಔಷಧ ಹಾಗೂ ಔಷಧ ಕಿಟ್ ವಿತರಣೆ ಮತ್ತು ಅಂಗವಿಕಲರಿಗೆ ನೆರವು ನೀಡಲು ಕ್ರಮ ವಹಿಸಲಾಗುವುದು ಎಂದು ಟ್ರಸ್ಟ್ ಗೌರವಾಧ್ಯಕ್ಷ ಪ್ರವೀಣ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಪರ್ಕಕ್ಕೆ: 9945279577 ಅಥವಾ 9980550099

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT