ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಐಐಐಟಿ ಜತೆಗೆ ಆರೋಗ್ಯ ಇಲಾಖೆ ಒಪ್ಪಂದ

Last Updated 29 ಆಗಸ್ಟ್ 2019, 19:51 IST
ಅಕ್ಷರ ಗಾತ್ರ

ಬೆಂಗಳೂರು: ತಾಂತ್ರಿಕ ಮಾರ್ಗದರ್ಶನ ಹಾಗೂ ಜ್ಞಾನದ ಪಾಲುದಾರರಾಗಲು ಧಾರವಾಡದ ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯ (ಐಐಐಟಿ) ಜತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಒಪ್ಪಂದ ಮಾಡಿಕೊಂಡಿದೆ.

ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಹಾಗೂ ಧಾರವಾಡ ಐಐಐಟಿ ನಿರ್ದೇಶಕ ಕವಿ ಮಹೇಶ್ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಎಲ್ಲಾ ಆಸ್ಪತ್ರೆಗಳನ್ನು ಕಂಪ್ಯೂಟರೀಕರಣಗೊಳಿಸಲು ಹಾಗೂ ಡಿಜಿಟಲ್ ಮೂಲಸೌಕರ್ಯವನ್ನು ನವೀಕರಿಸಲು ಯೋಜಿಸಲಾಗಿದೆ. ಆರೋಗ್ಯ ಕಾರ್ಯಕ್ರಮಗಳಿಗೆ ಪ್ರಸ್ತುತ ಬಹು ತಂತ್ರಾಂಶಗಳಿದ್ದು, ಅವುಗಳನ್ನು ಒಗ್ಗೂಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ಒಪ್ಪಂದ ಮಾಡಿಕೊಳ್ಳಲಾಗಿದೆ.

ಇಲಾಖೆಯ ವೆಬ್‌ಸೈಟ್‌ ಹಾಗೂ ಮೊಬೈಲ್ ಆ್ಯಪ್ ಸುಧಾರಿಸಲಾಗುವುದು. ಈ ಒಪ್ಪಂದ 3 ವರ್ಷ ಜಾರಿಯಲ್ಲಿ ಇರಲಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT