ಬೆಂಗಳೂರು: ಗರ್ಭಿಣಿಯರ ಸುರಕ್ಷತೆ ದೃಷ್ಟಿಯಿಂದ ಮಾತೃತ್ವ ಸುರಕ್ಷತಾ ಅಭಿಯಾನವನ್ನು ದೊಡ್ಡ ಮಟ್ಟದಲ್ಲಿ ನಡೆಸಲು ನಿರ್ಧರಿಸಿರುವ ಆರೋಗ್ಯ ಇಲಾಖೆ, ಪ್ರತಿ ತಿಂಗಳು 9 ಹಾಗೂ 24ರಂದು ಗರ್ಭಿಣಿಯರ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ.

ಜನವರಿ 22 ರಂದು ರಾಯಚೂರಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಗರ್ಭಿಣಿಯರಿಗಾಗಿಯೇ ಉಚಿತ ಆರೋಗ್ಯ ಶಿಬಿರ ಹಮ್ಮಿಕೊಂಡಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ತಾಯಂದಿರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಗರ್ಭಿಣಿಯರ ಆರೋಗ್ಯ ತಪಾಸಣಾ ಶಿಬಿರಗಳನ್ನು ದೊಡ್ಡಮಟ್ಟದಲ್ಲಿ ರಾಜ್ಯದಾದ್ಯಂತ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಸುವಂತೆ ಸಚಿವರು ಸೂಚನೆ ನೀಡಿದ್ದಾರೆ.

ಗುಣಮಟ್ಟದ ಸೇವೆ ಒದಗಿಸುವ ಸಲುವಾಗಿ ಆರೋಗ್ಯ ಇಲಾಖೆ ಹಲವು ಕ್ರಮಗಳನ್ನು ಕೊಂಡಿದೆ. ಪ್ರತಿ ಗರ್ಭಿಣಿಗೆ ಜನನ ಯೋಜನೆಯನ್ನು ಮುಂಚಿತವಾಗಿಯೇ ಖಚಿತಪಡಿಸಿಕೊಳ್ಳುವುದು, 500 ಎಂಸಿಜಿ ಕ್ಯಾಲ್ಸಿಯಂ ಅನ್ನು ಗರ್ಭಧಾರಣೆಯ 14ನೇ ವಾರದಿಂದ ಹೆರಿಗೆ ಮತ್ತು 6 ತಿಂಗಳ ನಂತರದ ಅವಧಿಗೆ ನೀಡುವುದು, ಪ್ರತಿ ಭೇಟಿಯಲ್ಲಿ ರಕ್ತದೊತ್ತಡ ಮತ್ತು ತೂಕವನ್ನು ದಾಖಲು ಮಾಡುವುದು, ಹೆರಿಗೆಯ ಲಕ್ಷಣಗಳು ಮತ್ತು ಅಪಾಯದ ಲಕ್ಷಣಗಳ ಬಗ್ಗೆ, ಗರ್ಭಿಣಿಯರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಅರಿವು ಮೂಡಿಸುವ ಕ್ರಮಗಳನ್ನು ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.