ಇಲಾಖೆಯ ಪ್ರಧಾನ ಕಾರ್ಯದರ್ಶ ಹರ್ಷ ಗುಪ್ತ ಅವರು ಸಹ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ‘ಕಳಪೆ ಔಷಧಗಳ ತಯಾರಿಕರ ವಿರುದ್ಧ ಒಂದೇ ಒಂದು ಪ್ರಕರಣ ದಾಖಲಿಸಿ, ಕ್ರಮಕೈಗೊಳ್ಳಲು ನಿಮಗೆ ಸಾಧ್ಯವಾಗಿಲ್ಲ. ನೀವು ಇನ್ನೇನು ಕೆಲಸ ಮಾಡುವಿರಿ ? ಸಭೆಗೆ ಬರುವ ಮುನ್ನ ಸಂಪೂರ್ಣ ಮಾಹಿತಿಯನ್ನ ತರಬೇಕು. ಅರೆ ಬರೆ ಅಂಕಿ ಅಂಶಗಳನ್ನ ನಮ್ಮ ಮುಂದಿಟ್ಟು ಕರ್ತವ್ಯದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಕಳಪೆ ಗುಣಮಟ್ಟದ ಔಷಧಗಳು ಸಾರ್ವಜನಿಕರಿಗೆ ಲಭ್ಯವಾಗದಂತೆ ನೋಡಿಕೊಳ್ಳುವುದು ನಿಮ್ಮ ಮುಖ್ಯ ಕೆಲಸ. ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿ’ ಎಂದು ಎಚ್ಚರಿಕೆ ನೀಡಿದರು.