ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24 ಗಂಟೆಗಳಲ್ಲಿ ಮೂತ್ರಪಿಂಡ ಕಸಿಗೆ ಹೈಕೋರ್ಟ್‌ ಆದೇಶ

Last Updated 10 ಮೇ 2018, 20:05 IST
ಅಕ್ಷರ ಗಾತ್ರ

ಬೆಂಗಳೂರು: ಪುಣೆಯ ವಾಯುಸೇನೆಯ ಕರ್ನಲ್ ಒಬ್ಬರಿಗೆ, ಅರ್ಜಿ ಸಲ್ಲಿಸಿದ 24 ಗಂಟೆಯೊಳಗೆ ಮೂತ್ರಪಿಂಡ ಕಸಿ ಮಾಡಲು, ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಗೆ ಹೈಕೋರ್ಟ್ ಆದೇಶಿಸಿದೆ.

ಕರ್ನಲ್ ಅವರ ಮೂತ್ರಪಿಂಡ ಕಸಿಗೆ ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಅನುಮತಿ ನಿರಾಕರಿಸಿದ್ದರು. ಇದನ್ನು ಮೂತ್ರಪಿಂಡ ನೀಡಲು ಸಿದ್ಧವಿರುವ ಮಹಿಳೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಈ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿ, ಆಸ್ಪತ್ರೆಯ ಮಾನವ ಅಂಗಾಂಗಗಳ ಕಸಿ ಅನುಮೋದನಾ ಸಮಿತಿ ಮುಖ್ಯಸ್ಥರಿಗೆ ತಕ್ಷಣದ ಕ್ರಮಕ್ಕೆ ಆದೇಶಿಸಿದೆ.

ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ ಆಯುಕ್ತರು ಹಾಗೂ ಮಾನವ ಅಂಗಾಂಗಗಳ ಕಸಿ ಅನುಮೋದನಾ ಸಮಿತಿ ಅಧ್ಯಕ್ಷರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ ಆಕ್ಷೇಪಣೆ ಸಲ್ಲಿಸುವಂತೆಯೂ ಸೂಚಿಸಿದೆ.

‘ಮೂತ್ರಪಿಂಡ ಕಸಿಗೆ ಅನುಮತಿ ನಿರಾಕರಿಸಿ ರಾಜ್ಯ ಆರೋಗ್ಯ ಇಲಾಖೆ ಏ.10ರಂದು ಆದೇಶಿಸಲಾಗಿದೆ. ಇದು ವ್ಯಾಪ್ತಿ ಮೀರಿ ಹೊರಡಿಸಿರುವ ಆದೇಶ’ ಎಂಬುದು ಅರ್ಜಿದಾರರ ಆಕ್ಷೇಪ. ಅರ್ಜಿದಾರರ ಪರ ಪಿ.ಅನುಚೆಂಗಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT