ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮೀಕ್ಷೆಗೆ ತೆರಳಿದ ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ: ಗಂಭೀರವಾಗಿ ಪರಿಗಣಿಸಿದ ಸರ್ಕಾರ

Last Updated 2 ಏಪ್ರಿಲ್ 2020, 7:38 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್ ವ್ಯಾಪಕವಾಗಿ ಹರಡುವ ಭೀತಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಸಮೀಕ್ಷೆ ಮಾಡಲು ತೆರಳಿದ್ದ ನರ್ಸ್, ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ ಘಟನೆ ನಗರದ ಸಾರಾಯಿ‌ ಪಾಳ್ಯದ ಸಾಧಿಕ್ ಲೇಔಟ್ ನಲ್ಲಿ ನಡೆದಿದೆ.

ಐದು ದಿನಗಳಿಂದ ನರ್ಸ್, ಆಶಾ ಕಾರ್ಯಕರ್ತೆಯರು ನೆಗಡಿ, ಕೆಮ್ಮು, ಜ್ವರ ಕುರಿತು ಜನರಿಂದ ಮಾಹಿತಿ ಸಂಗ್ರಹಿಸುತ್ತಿದ್ದು, ಸಾಧಿಕ್ ಲೇಔಟ್ ಗೆ ತೆರಳಿ ಮರಳುತ್ತಿದ್ದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರ ಬಳಿ ಇದ್ದ ವರದಿಯನ್ನು ದುಷ್ಕರ್ಮಿಗಳು ಹರಿದು ಹಾಕಿದ್ದಾರೆ ಎಂದು ಗೊತ್ತಾಗಿದೆ.

ಅಲ್ಲದೆ, ಅವರ ಮೊಬೈಲ್ ಫೋನ್ ಕಸಿದುಕೊಂಡು, 'ಯಾರನ್ನು ಕರೆಯುತ್ತೀರಾ' ಕರೆಯಿರಿ' ಎಂದು ಬೆದರಿಕ ಹಾಕಿದ ದುಷ್ಕರ್ಮಿಗಳು, ತಮಗೆ ಯಾವುದೇ ಮಾಹಿತಿ,‌ ಮೊಬೈಲ್ ಸಂಖ್ಯೆ ನೀಡದಂತೆ ಸ್ಳೀಯಯ ಮಸೀದಿಯ ಮೈಕ್ ನಲ್ಲಿ ಅನೌನ್ಸ್ ಮಾಡಿದ್ದಾರೆ ಎಂದು ಸ್ಥಳದಲ್ಲಿದ್ದ ಸಿಬ್ಬಂದಿ ಆರೋಪಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದಾಗ ಆರೋಗ್ಯ ಇಲಾಖೆಯ ಅಧಿಕಾರಿಗಳಾಗಲೀ, ಪೊಲೀಸರು ಸ್ಪಂದಿಸಿಲ್ಲ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಪ್ರತಿಕ್ರಿಯಿಸಿ, ಸಾಧಿಕ್ ಲೇಔಟ್ ನಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಹೀಗಾಗಿ, ಲೇಔಟ್ ನಲ್ಲಿ‌ ಸಮೀಕ್ಷೆ ಮಾಡಲು‌ ನಿರ್ಧರಿಸಲಾಗಿತ್ತು. ಇದಕ್ಕೆ ಅಲ್ಲಿನ ಸಾರ್ವಜನಿಕರು ವಿರೋಧ ವ್ಯಕ್ತಪಡಿಸಿದ್ದರು ಎಂದರು.

ಸ್ಥಳಕ್ಕೆ ಹೊಯ್ಸಳ ಪೊಲೀಸರು ತೆರಳಿ, ಗುಂಪಾಗಿದ್ದ ಜನರನ್ನು ಚದುರಿಸಿದ್ದು,‌ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದರು‌. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ. ನರ್ಸ್, ಆಶಾ ಕಾರ್ಯಕರ್ತೆಯರು ದೂರು ನೀಡಿದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಹಲ್ಲೆಗೆ ಒಳಗಾದ ಕಾರ್ಯಕರ್ತೆಯ ಹೆಗ್ಗಡೆ ನಗರದ ಮನೆಗೆ ಉಪ‌ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಹಲ್ಲೆ ನಡೆಸಿದವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

ದೂರು ಸ್ವೀಕರಿಸದ ಪೊಲೀಸರ ವಿರುದ್ಧ ಕ್ರಮ ತೆಗೆದುಕೊಳ್ಳಲು ಉಪ ಮುಖ್ಯಮಂತ್ರಿ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT