ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಇಥಿಯೋಪಿಯಾದ ಮಕ್ಕಳಿಗೆ ಹೃದಯ ಶಸ್ತ್ರಚಿಕಿತ್ಸೆ

Published 11 ಫೆಬ್ರುವರಿ 2024, 14:39 IST
Last Updated 11 ಫೆಬ್ರುವರಿ 2024, 14:39 IST
ಅಕ್ಷರ ಗಾತ್ರ

ಬೆಂಗಳೂರು: ರೋಟರಿ ಬೆಂಗಳೂರು ಮಿಡ್‌ಟೌನ್ ಸಹಯೋಗದಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ಇಥಿಯೋಪಿಯಾದ ಐವರು ಮಕ್ಕಳಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಸಿದೆ. 

ಈ ಶಸ್ತ್ರಚಿಕಿತ್ಸೆಗಳಿಗೆ ಒಟ್ಟು ₹ 7.5 ಲಕ್ಷ ವೆಚ್ಚವಾಗಿದ್ದು, ಈ ಮೊತ್ತವನ್ನು ರೋಟರಿ ಬೆಂಗಳೂರು ಮಿಡ್‌ಟೌನ್‌ನ ಸದಸ್ಯ ಬಿಮಲ್ ದೇಸಾಯಿ ಭರಿಸಿದ್ದಾರೆ. ಇದರಿಂದಾಗಿ ಜನ್ಮಜಾತ ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದ ಮಕ್ಕಳು ಚೇತರಿಸಿಕೊಂಡಿದ್ದಾರೆ. 

‘ಜನ್ಮಜಾತ ಹೃದಯ ಸಂಬಂಧಿ ಸಮಸ್ಯೆ ಎದುರಿಸುತ್ತಿದ್ದ ಇಥಿಯೋಪಿಯಾದ ಮಕ್ಕಳು ಚಿಕಿತ್ಸೆಗಾಗಿ ಇಲ್ಲಿಗೆ ಬಂದಿದ್ದರು. ದಾನಿಗಳ ನೆರವಿನಿಂದ ಹೃದಯ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ’ ಎಂದು ಸಂಸ್ಥೆ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT