ಗುರುವಾರ , ಜನವರಿ 23, 2020
18 °C

ಹೆಚ್ಚು ಶುಲ್ಕ: ಕ್ರಮಕ್ಕೆ ಹೈಕೋರ್ಟ್ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಿಗದಿಗಿಂತ ಅಧಿಕ ಶುಲ್ಕ ವಸೂಲು ಮಾಡುವ ಅನುದಾನಿತ ಕಾಲೇಜುಗಳ ವಿರುದ್ಧ ನೀಡಲಾಗುವ ದೂರನ್ನು ನಾಲ್ಕು ತಿಂಗಳಲ್ಲಿ ಪರಿಗಣಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ವಕೀಲ ಎನ್‌.ಪಿ.ಅಮೃತೇಶ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು. ‘ಕ್ರಮ ಕೈಗೊಳ್ಳುವ ಮುನ್ನ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಸೇರಿದಂತೆ ಸಂಬಂಧಿಸಿದವರ ಅಹವಾಲುಗಳನ್ನು ಆಲಿಸಿ ತೀರ್ಮಾನ ಕೈಗೊಳ್ಳಬೇಕು ಮತ್ತು ಆ ನಿರ್ಧಾರವನ್ನು ಅರ್ಜಿದಾರರಿಗೆ ತಿಳಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.

ಖಾಸಗಿ ಅನುದಾನಿತ ಕಾಲೇಜುಗಳಲ್ಲಿ ವಿಜ್ಞಾನ, ವಾಣಿಜ್ಯ ಮತ್ತು ಕಲಾ ವಿಭಾಗಗಳ ಕೋರ್ಸ್‌ಗಳಿಗೆ ಸರ್ಕಾರ ನಿಗದಿಪಡಿಸಿದ ಶುಲ್ಕಕ್ಕಿಂತ ಹೆಚ್ಚು ವಸೂಲು ಮಾಡಲಾಗುತ್ತಿದೆ. ಪ್ರವೇಶಕ್ಕೆ ಕಟ್ ಆಫ್ ಅಂಕಗಳನ್ನು ನಿಗದಿಪಡಿಸಲಾಗುತ್ತದೆ. ಇದರಿಂದ ಕಡಿಮೆ ಅಂಕ ಹೊಂದಿದ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ’ ಎಂಬುದು ಅರ್ಜಿದಾರರ ಆಕ್ಷೇಪ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು