ಬುಧವಾರ, ಆಗಸ್ಟ್ 10, 2022
25 °C

ನಗರದ ಹಲವೆಡೆ ಜೋರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಹಲವು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ, ಸೋಮವಾರ ರಾತ್ರಿ ಜೋರಾಗಿ ಸುರಿದು ತಂಪಿನ ಅನುಭವ ನೀಡಿತು.

ಸೋಮವಾರ ಬೆಳಿಗ್ಗೆಯಿಂದ ಬಿಸಿಲು ಹೆಚ್ಚಿತ್ತು. ಕೆಲ ಪ್ರದೇಶಗಳಲ್ಲಿ ಮಧ್ಯಾಹ್ನ ಮೋಡ ಕವಿದ ವಾತಾವರಣ ಕಾಣಿಸಿಕೊಂಡಿತ್ತು. ಸಂಜೆ ತುಂತುರು ಮಳೆ ಆರಂಭವಾಗಿತ್ತು. ರಾತ್ರಿ 7ರ ನಂತರ ತಂಪಿನ ಗಾಳಿ ಸಮೇತ ಮಳೆ ಆಯಿತು.

ಯಶವಂತಪುರ, ಮಲ್ಲೇಶ್ವರ, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ರಾಜರಾಜೇಶ್ವರಿನಗರ ಹಾಗೂ ಸುತ್ತಮುತ್ತ ಮಳೆ ಇತ್ತು.

ಶಿವಾಜಿನಗರ, ಎಂ.ಜಿ.ರಸ್ತೆ, ಕೋರಮಂಗಲ, ಮಡಿವಾಳ, ಲಾಲ್‌ಬಾಗ್, ವಿಲ್ಸನ್ ಗಾರ್ಡನ್, ಶಾಂತಿನಗರ, ಅಶೋಕನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲೂ ಮಳೆ ಸುರಿಯಿತು.

‘ನಗರದ ಹಲವೆಡೆ ಮಳೆ ಆಗಿದೆ. ಹಾನಿ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು