ಬುಧವಾರ, ಆಗಸ್ಟ್ 10, 2022
20 °C

ನಗರದ ವಿವಿಧೆಡೆ ಜೋರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ ನಗರದ ವಿವಿಧೆಡೆ ಬುಧವಾರ ಗಾಳಿ ಸಹಿತ ಜೋರು ಮಳೆಯಾಯಿತು. 

ನಗರದಲ್ಲಿ ಮಧ್ಯಾಹ್ನದವರೆಗೆ ಮೋಡ ಕವಿದ ವಾತಾವರಣ ಹಾಗೂ ತಂಪಾದ ಗಾಳಿ ಬೀಸುತ್ತಿತ್ತು. ಬಳಿಕ ಹಲವು ಭಾಗಗಳಲ್ಲಿ ಮಳೆ ಆರಂಭಗೊಂಡಿತು.

ಆರ್.ಟಿ.ನಗರ, ಹೆಬ್ಬಾಳ, ಮನೋರಾಯನಪಾಳ್ಯ, ಗಿರಿನಗರ, ಶ್ರೀನಗರ, ರಾಜಾಜಿನಗರ, ಗುಟ್ಟಹಳ್ಳಿ, ಹಾರೋಹಳ್ಳಿ, ಹೆಗ್ಗನಹಳ್ಳಿ, ಯಲಹಂಕ, ರಾಜರಾಜೇಶ್ವರಿನಗರ, ಮಲ್ಲೇಶ್ವರ, ಬ್ಯಾಟರಾಯನಪುರ, ವಿದ್ಯಾಪೀಠ, ಸಂಪಂಗಿರಾಮನಗರ, ಜಕ್ಕೂರು, ವಿಜಯನಗರ, ಜೆ.ಪಿ.ನಗರ ಸೇರಿದಂತೆ ವಿವಿಧೆಡೆ ಜಿಟಿಜಿಟಿ ಮಳೆ ಸುರಿಯಿತು. ಒಟ್ಟಾರೆ ನಗರದಲ್ಲಿ ಗರಿಷ್ಠ 2.5 ಸೆಂ.ಮೀ ಮಳೆ ದಾಖಲಾಗಿದೆ.

ಮುಂಗಾರಿನ ಪರಿಣಾಮ ನಗರದಲ್ಲಿ ಮುಂದಿನ ಎರಡು ದಿನಗಳಲ್ಲಿ ಮೋಡಕವಿದ ವಾತಾವರಣ ಇರಲಿದೆ. ಜೋರು ಗಾಳಿಯೊಂದಿಗೆ ಆಗಾಗ ಮಳೆಯಾಗುವ ಮುನ್ಸೂಚನೆ ಇರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು