ಮಂಗಳವಾರ, ಆಗಸ್ಟ್ 20, 2019
27 °C

7,8ರಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ನಿರೀಕ್ಷೆ

Published:
Updated:

ಬೆಂಗಳೂರು: ರಾಜ್ಯದಲ್ಲಿ ಮುಂದಿನ 24 ಗಂಟೆ ಅವಧಿಯಲ್ಲಿ ವ್ಯಾಪಕವಾಗಿ ಮಳೆ ಸುರಿಯಲಿದ್ದು, ಇದೇ 7 ಮತ್ತು 8ರಂದು ಕರಾವಳಿ, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ಗಂಟೆಗೆ 40ರಿಂದ 50 ಕಿ.ಮೀ.ವೇಗದಲ್ಲಿ ಗಾಳಿ ಬೀಸುತ್ತಿದ್ದು, 3ರಿಂದ 3.5 ಮೀಟರ್‌ನಷ್ಟು ಎತ್ತರದ ಅಲೆಗಳೂ ಏಳುತ್ತಿವೆ. ಹೀಗಾಗಿ ಇದೇ 10ರವರೆಗೆ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಉತ್ತರ ಒಳನಾಡಿನಲ್ಲಿ ಮಂಗಳವಾರ ವ್ಯಾಪಕವಾಗಿ ಮಳೆ ಸುರಿಯಲಿದ್ದು, ಬುಧವಾರದಿಂದ ಮಳೆಯ ಪ್ರಮಾಣ ತಗ್ಗಲಿದೆ. ದಕ್ಷಿಣ ಒಳನಾಡಿನಲ್ಲಿ ನಾಲ್ಕು ದಿನ ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ.

ಕದ್ರಾದಲ್ಲಿ 17 ಸೆಂ.ಮೀ.ಮಳೆ: ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಕದ್ರಾದಲ್ಲಿ 17 ಸೆಂ.ಮೀ.ಮಳೆಯಾಗಿದೆ. ಲಿಂಗನಮಕ್ಕಿ, ಹೊಸನಗರ 14, ಕೊಲ್ಲೂರು, ಸಿದ್ದಾಪುರ 13, ಲೋಂಡಾ, ಕಳಸ, ಶಿವಮೊಗ್ಗ 12, ಕಮ್ಮರಡಿ 11, ಮೂಲ್ಕಿ 10, ಧರ್ಮಸ್ಥಳ 9, ಪಣಂಬೂರು, ಕಾರವಾರ, ಹುಂಚದಕಟ್ಟೆ 8 ಸೆಂ.ಮೀ.ಮಳೆಯಾಗಿದೆ.

Post Comments (+)