ಮಂಗಳವಾರ, ಮೇ 24, 2022
30 °C

ಬೆಂಗಳೂರಿನ ಹಲವೆಡೆ ಜೋರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಹಲವು ಪ್ರದೇಶಗಳಲ್ಲಿ ಭಾನುವಾರ ಸಂಜೆಯಿಂದ ಮಳೆ ಸುರಿಯುತ್ತಿದೆ.

ನಗರದ ಬಹುತೇಕ ಕಡೆ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಬೆಳಿಗ್ಗೆಯಿಂದಲೇ ತಂಪಿನ ಗಾಳಿಯೂ ಬೀಸುತ್ತಿತ್ತು. ಆಗಾಗ ಬಿಸಿಲು ಕಾಣಿಸಿಕೊಳ್ಳುತ್ತಿತ್ತು. ಸಂಜೆಯಿಂದ ಜೋರು ಗಾಳಿ ಜೊತೆ ಮಳೆ ಬರಲಾರಂಭಿಸಿದೆ.

ರಾಜರಾಜೇಶ್ವರಿನಗರ, ದೀಪಾಂಜಲಿನಗರ, ವಿಜಯನಗರ, ರಾಜಾಜಿನಗರ, ಯಶವಂತಪುರ, ಬಾಗಲಗುಂಟೆ, ಪೀಣ್ಯ, ವಿದ್ಯಾರಣ್ಯಪುರ, ಜಾಲಹಳ್ಳಿ, ಗೊರಗುಂಟೆಪಾಳ್ಯ, ಲಗ್ಗೆರೆ, ಕೋರಮಂಗಲ, ಮಡಿವಾಳ, ಎಂ.ಜಿ.ರಸ್ತೆ, ಶಿವಾಜಿನಗರ, ಅಶೋಕನಗರ, ಮಡಿವಾಳ ಹಾಗೂ ಹಲವೆಡೆ ಮಳೆ  ಆಗುತ್ತಿದೆ.

ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಖೇಲೋ ಇಂಡಿಯಾ ಕ್ರೀಡಾಕೂಟ ತಾತ್ಕಾಲಿಕ ಸ್ಥಗಿತವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು