ಬುಧವಾರ, ನವೆಂಬರ್ 25, 2020
19 °C

ಹಲವೆಡೆ ಜೋರು ಮಳೆ ಹೊಳೆಯಂತೆ ಹರಿದ ನೀರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ಹಲವೆಡೆ ಭಾನುವಾರ ಸಂಜೆ ಜೋರು ಮಳೆಯಾಗಿದ್ದು, ಹಲವು ರಸ್ತೆಗಳಲ್ಲಿ ಹೊಳೆಯಂತೆ ನೀರು ಹರಿಯಿತು.

ನಗರದಲ್ಲಿ ಕೆಲ ದಿನಗಳಿಂದ ಮೋಡ ಕವಿದ ವಾತಾವರಣ ಇದೆ. ಭಾನುವಾರವೂ ಬೆಳಿಗ್ಗೆಯಿಂದ ಹಲವೆಡೆ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನ ವೇಳೆ ಕೆಲವೆಡೆ ಮಾತ್ರ ಜಿಟಿ ಜಿಟಿ ಮಳೆಯಾಗಿತ್ತು. ಸಂಜೆ ವೇಳೆ ಮಳೆ ಜೋರಾಗಿ ಸುರಿಯಿತು.

ಆರ್‌.ಟಿ.ನಗರ, ಸಂಜಯನಗರ, ಹೆಬ್ಬಾಳ, ಅಮೃತಹಳ್ಳಿ, ಸದಾಶಿವನಗರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಿತ್ತು. ಪೀಣ್ಯ, ಯಶವಂತಪುರ, ಮಲ್ಲೇಶ್ವರ, ಬಸವೇಶ್ವರನಗರ, ರಾಜಾಜಿನಗರ, ವಿಜಯನಗರ, ಯಶವಂತಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲೂ ಮಳೆ ಆಯಿತು.

‘ಶುಕ್ರವಾರ ರಾತ್ರಿಯೂ ನಗರದಲ್ಲಿ ಮಳೆ ಆಗಿತ್ತು. ಯಾವುದೇ ಹಾನಿ ಆಗಿರಲಿಲ್ಲ. ಭಾನುವಾರವೂ ಸಂಜೆ ಮಳೆ ಜೋರಾಗಿ ಸುರಿದಿದ್ದು, ರಸ್ತೆಯಲ್ಲಿ ಹೆಚ್ಚು ನೀರು ಹರಿದಿದೆ. ಈ ಬಗ್ಗೆ ದೂರುಗಳು ಹೆಚ್ಚಾಗಿ ಬಂದಿದ್ದ, ಸಿಬ್ಬಂದಿ ತ್ವರಿತವಾಗಿ ಸ್ಪಂದಿಸಿದ್ದಾರೆ. ಮರ ಬಿದ್ದ ಹಾಗೂ ಮಳೆಯಿಂದ ಹಾನಿಯಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು