ಶುಕ್ರವಾರ, ಮೇ 14, 2021
32 °C

ಬೆಂಗಳೂರಿನಲ್ಲಿ ಮಧ್ಯಾಹ್ನವೇ ಜೋರು ಮಳೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಬಹುತೇಕ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನವೇ ಜೋರು ಮಳೆ ಸುರಿಯುತ್ತಿದೆ. ಬೆಳಿಗ್ಗೆಯಿಂದ ಬಿಸಿಲು ಹಾಗೂ ಕೆಲ ಬಾರಿ ಮೋಡ ಕವಿದ ವಾತಾವರಣವಿತ್ತು.

ಮಧ್ಯಾಹ್ನ 2.40 ಗಂಟೆಯಿಂದಲೇ ಜಿಟಿ ಜಿಟಿಯಾಗಿ ಮಳೆ ಆರಂಭವಾಗಿ, ನಂತರ ಜೋರು ಮಳೆ ಬರುತ್ತಿದೆ. ಗಾಳಿಯೂ ಜೋರಾಗಿ ಬೀಸುತ್ತಿದೆ.

ಯಶವಂತಪುರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿಲೇಔಟ್, ಮೆಜೆಸ್ಟಿಕ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಗುಡುಗು- ಸಿಡಿಲು ಸಹಿತ ಮಳೆ ಸುರಿಯುತ್ತಿದೆ.

ಕೊರೊನಾ ಸೋಂಕು ತಡೆಗೆ ಹಲವು ಕ್ರಮಗಳನ್ನು ಸರ್ಕಾರ ಕೈಗೊಂಡಿದ್ದರಿಂದ ನಗರದಲ್ಲಿ ಜನರ ಓಡಾಟ ಕಡಿಮೆ ಇದೆ. ಮಳೆಯಿಂದಾಗಿ ನೀರು ರಸ್ತೆ ಮೇಲೆಯೇ ಹರಿಯುತ್ತಿದೆ. ಕೆಲ ಕಡೆ ಕಾಲುವೆಗಳಲ್ಲಿ ನೀರು ತುಂಬಿ ಹರಿಯುತ್ತಿದ್ದು, ತ್ಯಾಜ್ಯವೆಲ್ಲ ರಸ್ತೆಗೆ ಬಂದು ಬಿದ್ದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು