ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಮರಗಳು ನೆಲಕ್ಕೆ

Last Updated 7 ಏಪ್ರಿಲ್ 2020, 2:16 IST
ಅಕ್ಷರ ಗಾತ್ರ
ADVERTISEMENT
""

ಬೆಂಗಳೂರು: ಕೆಲದಿನಗಳಿಂದ ಬಿಸಿಲಿನತಾಪ ಹೆಚ್ಚಾಗಿದ್ದ ನಗರದಲ್ಲಿ ಸೋಮವಾರ ಸಂಜೆ ಗುಡುಗು ಸಿಡಿಲು ಸಹಿತವಾಗಿ ಧಾರಾಕಾರ ಮಳೆ ಸುರಿಯಿತು. ನಗರದ ಎಂಟು ಕಡೆಗಳಲ್ಲಿ ಮರಗಳು ನೆಲಕ್ಕುರುಳಿದವು.

ಕೊರೊನಾ ವೈರಾಣು ಹರಡುವಿಕೆ ತಡೆಯುವುದಕ್ಕಾಗಿ ನಗರವನ್ನು ಲಾಕ್‌ಡೌನ್ ಮಾಡಲಾಗಿದೆ. ಮನೆಯಲ್ಲಿರುವ ಜನ ಬಿಸಿಲಿನ ತಾಪದಿಂದ ಸುಸ್ತಾಗಿದ್ದರು. ಸಂಜೆ ಒಂದು ಗಂಟೆಗೂ ಹೆಚ್ಚು ಹೊತ್ತು ಸುರಿದ ಮಳೆಯು ಜನರಿಗೆ ತಂಪಿನ ಅನುಭವ ನೀಡಿತು.

ಮಧ್ಯಾಹ್ನದಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಕೆಲ ಪ್ರದೇಶಗಳಲ್ಲಿ ಮಾತ್ರ ಸಂಜೆ ಜೋರು ಮಳೆ ಆಯಿತು. ರಾತ್ರಿ ಮತ್ತಷ್ಟು ಪ್ರದೇಶಗಳಲ್ಲಿ ಮಳೆ ಅಬ್ಬರ ಹೆಚ್ಚಾಗಿತ್ತು. ಬಹುತೇಕ ಕಡೆ ರಸ್ತೆಗಳಲ್ಲಿ ನೀರು ಹರಿಯಿತು.

ಇಂದಿರಾನಗರ, ಹಲಸೂರು, ಎಂ.ಜಿ.ರಸ್ತೆ, ರಾಜಾಜಿನಗರ, ಬಸವೇಶ್ವರನಗರ, ವಿಜಯನಗರ, ಯಶವಂತಪುರ, ಪೀಣ್ಯ, ಸಂಪಂಗಿರಾಮನಗರ, ನಾಗರಬಾವಿ, ಕೆಂಗೇರಿ, ರಾಜರಾಜೇಶ್ವರಿನಗರ, ಅನ್ನಪೂರ್ಣೇಶ್ವರಿನಗರ, ಬನಶಂಕರಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಜೋರಾಗಿ ಸುರಿಯಿತು.

ವಿಜಯನಗರ, ನಾಗರಬಾವಿ, ಕಾಟನ್‌ಪೇಟೆ, ಬಸವೇಶ್ವರನಗರ, ರಾಜಾಜಿನಗರ ಸೇರಿ ನಗರದ 8 ಕಡೆಗಳಲ್ಲಿ ಮರಗಳು ಉರುಳಿಬಿದ್ದ ಬಗ್ಗೆಬಿಬಿಎಂಪಿ ಸಹಾಯವಾಣಿಗೆ ದೂರುಗಳು ಬಂದಿವೆ.

ನಿಷೇಧಾಜ್ಞೆ ನಡುವೆಯೂ ಕೆಲವರು ವಾಯುವಿಹಾರಕ್ಕೆಂದು ಮನೆಯಿಂದ ಹೊರಗೆ ಬಂದಿದ್ದರು. ಮಳೆ ಬರುತ್ತಿ
ದ್ದಂತೆ ವಾಪಸು ಮನೆ ಸೇರಿದರು.

ನಗರದಲ್ಲಿ ತೆರೆಯಲಾಗಿರುವ ಚೆಕ್‌ಪೋಸ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಪೊಲೀಸರು, ಅಕ್ಕ–ಪಕ್ಕದ ಕಟ್ಟಡಗಳಲ್ಲಿ ಆಶ್ರಯ ಪಡೆದಿದ್ದು ಕಂಡುಬಂತು.

ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುವುದರಿಂದ ವಾಹನಗಳ ಸಂಚಾರ ಹಾಗೂ ಜನರ ಓಡಾಟ ವಿರಳವಾಗಿದೆ. ಹೀಗಾಗಿ, ಮಳೆ ಸಂಬಂಧಿತ ಗಂಭೀರ ಸಮಸ್ಯೆಗಳ ಬಗ್ಗೆ ಯಾವುದೇ ದೂರುಗಳು ಬಂದಿಲ್ಲವೆಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

ವಿದ್ಯುತ್ ವ್ಯತ್ಯಯ: ಜೋರು ಮಳೆಯಿಂದಾಗಿ ರಾಜಾಜಿನಗರ, ಯಶವಂತಪುರ, ಪೀಣ್ಯ, ಲಗ್ಗೆರೆ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಯಿತು.

ದಾಬಸ್ ಪೇಟೆ ಸುತ್ತಮುತ್ತ ಆಲಿಕಲ್ಲು ಮಳೆ

ದಾಬಸ್ ಪೇಟೆ: ದಾಬಸ್ ಪೇಟೆ ಸುತ್ತಮುತ್ತ ಸೋಮವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಮಳೆಯಾಗಿದೆ.

ಬಿಲ್ಲಿನ ಕೋಟೆ, ಗುಂಡೇನಹಳ್ಳಿ, ಹೊಸಹಳ್ಳಿ, ಕೆಂಗಲ್ ಕೆಂಪೋಹಳ್ಳಿ ಭಾಗಗಳಲ್ಲಿ ಮಳೆಯೊಂದಿಗೆ ಆಲಿಕಲ್ಲು ಬಿದ್ದವು. ಚಿಕ್ಕ ಚಿಕ್ಕ ಗುಂಡಿಗಳಿಗೆ ನೀರು ಬಂದಿದೆ.

ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಕಂಡು ಬಂತು. ಮಧ್ಯಾಹ್ನ 3ರ ಸುಮಾರಿಗೆ ಮಳೆ ಸುರಿಯಲಾರಂಭಿಸಿತು. ಮಳೆಯಿಂದ ಸೋಂಪುರ ಹೋಬಳಿಯ ಗುಂಡೇನಹಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಗೆ ನೀರು ನುಗ್ಗಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT