ಸೋಮವಾರ, ಮೇ 23, 2022
30 °C

ರಾಜಧಾನಿಯಲ್ಲಿ ಜೋರು ಮಳೆ: ಗುಡುಗು–ಸಿಡಿಲಿನ ಅಬ್ಬರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದ ಹಲವೆಡೆ ಜೋರು ಮಳೆ ಸುರಿಯುತ್ತಿದ್ದು, ಗುಡುಗು–ಸಿಡಿಲಿನ ಅಬ್ಬರವೂ ಇದೆ.

ಮೆಜೆಸ್ಟಿಕ್, ರಾಜಾಜಿನಗರ, ಬಸವೇಶ್ವರನಗರ, ಮಹಾಲಕ್ಷ್ಮಿ ಲೇಔಟ್, ಯಶವಂತಪುರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮಳೆ ಅಬ್ಬರ ಜೋರಾಗಿದೆ.

ಇದನ್ನೂ ಓದಿ.. ವಿವಿಧೆಡೆ ಅಕಾಲಿಕ ಮಳೆ, ಕೃಷಿಕರಿಗೆ ಆತಂಕ

ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ 5ರ ನಂತರ ಹಲವೆಡೆ ಜಿಟಿ ಜಿಟಿಯಾಗಿ ಮಳೆ ಸುರಿಯಲಾರಂಭಿಸಿದೆ. ಕೆಲ ನಿಮಿಷಗಳಲ್ಲೇ ಮಳೆ ಜೋರಾಗಿ, ರಸ್ತೆಯಲ್ಲೇ ನೀರು ಹರಿಯುತ್ತಿದೆ.

ಪ್ರಮುಖ ರಸ್ತೆಗಳಲ್ಲಿ ನೀರು ಹರಿಯುತ್ತಿದ್ದು, ಅದರಲ್ಲೇ ವಾಹನಗಳು ಸಂಚರಿಸುತ್ತಿವೆ. ಸಂಜೆ ಕೆಲಸ ಮುಗಿಸಿ ಬಹುತೇಕರು ಮನೆಯತ್ತ ಹೊರಟಿದ್ದು, ರಸ್ತೆಯಲ್ಲಿ ನೀರು ಇರುವುದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ಮೆಜೆಸ್ಟಿಕ್ ಹಾಗೂ ಸುತ್ತಮುತ್ತ ದಟ್ಟಣೆ ಉಂಟಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು