ಗುರುವಾರ , ಜನವರಿ 21, 2021
22 °C

ನಗರದ ಹಲವೆಡೆ ಜೋರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಚಳಿ ಪ್ರಮಾಣ ಹೆಚ್ಚಿದ್ದು, ಅದರ ಜೊತೆಯಲ್ಲಿ ಮೋಡ ಕವಿದ ವಾತಾವರಣವೂ ಕಂಡುಬರುತ್ತಿದೆ. ಭಾನುವಾರ ಸಂಜೆ ನಗರದ ಹಲವೆಡೆ ಜೋರು ಮಳೆಯೂ ಸುರಿಯಿತು.

ಹಲವು ದಿನಗಳಿಂದ ನಗರದಲ್ಲಿ ಮೋಡ ಕವಿದ ವಾತಾವರಣವಿದೆ. ಅಲ್ಲಲ್ಲಿ ಜಿಟಿ ಜಿಟಿ ಮಳೆಯೂ ಸಾಮಾನ್ಯವಾಗಿದೆ. ಭಾನುವಾರ ಸಂಜೆ ದೊಮ್ಮಲೂರು, ಸೀಗೆಹಳ್ಳಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಪ್ರಮಾಣ ಹೆಚ್ಚಿತ್ತು.

ಜಯನಗರ, ಜೆ.ಪಿ.ನಗರ, ರಾಜಾಜಿನಗರ, ಮಲ್ಲೇಶ್ವರ, ವಿಜಯನಗರ, ರಾಜರಾಜೇಶ್ವರಿನಗರ, ಕಾಮಾಕ್ಷಿಪಾಳ್ಯ, ಚಾಮರಾಜನಗರ, ಕೆ.ಆರ್.ಮಾರುಕಟ್ಟೆ, ಕಲಾಸಿಪಾಳ್ಯ, ಮೆಜೆಸ್ಟಿಕ್, ಶೇಷಾದ್ರಿಪುರ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲೂ ಜೋರು ಮಳೆ ಇತ್ತು. ಅರ್ಧ ಗಂಟೆ ನಿರಂತರವಾಗಿ ಸುರಿದ ಮಳೆಯಿಂದಾಗಿ ಕೆಲ ರಸ್ತೆಗಳಲ್ಲಿ ನೀರು ಹರಿಯಿತು. ಅದೇ ನೀರಿನಲ್ಲೇ ವಾಹನಗಳು ಸಂಚರಿಸಿದವು. ಕೆಲ ವಾಹನಗಳು ಕೆಟ್ಟು ನಿಂತಿದ್ದವು.

‘ಕೆಲ ಭಾಗಗಳಲ್ಲಿ ಮಳೆ ಪ್ರಮಾಣ ಹೆಚ್ಚಿತ್ತು. ಆದರೆ, ಹಾನಿ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ. ರಸ್ತೆಯಲ್ಲಿ ನಿಂತಿದ್ದ ನೀರು, ಕೆಲ ಗಂಟೆಗಳ ಬಳಿಕ ಖಾಲಿ ಆಗಿದೆ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿದರು.

‘ಭಾನುವಾರ ನಸುಕಿನಿಂದ ರಾತ್ರಿ 8.30 ಗಂಟೆಯವರೆಗೆ ಸರಾಸರಿ 2.08 ಮಿ.ಮೀ ಸರಾಸರಿ ಮಳೆ ಆಗಿದೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು